Ad Widget

ವಳಲಂಬೆ ಗಣೇಶೋತ್ಸವಕ್ಕೆ ಚಾಲನೆ – ಗಣಪತಿ ಪ್ರತಿಷ್ಠೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 22 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸ್ಥಾಪಕಾಧ್ಯಕ್ಷ ವೆಂಕಟ್ ದಂಬೆಕೋಡಿ, ಅಧ್ಯಕ್ಷ ಹರೀಶ್ಚಂದ್ರ ಕೇಪಳಕಜೆ, ಕಾರ್ಯದರ್ಶಿ ದಿಗಂತ್ ಕಡ್ತಲ್ ಕಜೆ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಗಣೇಶೋತ್ಸವ ಸಮಿತಿ ಪೂರ್ವಾಧ್ಯಕ್ಷ ವೆಂಕಟ್ ವಳಲಂಬೆ, ವ್ಯವಸ್ಥಾಪನಾ ಸಮಿತಿ ಸದಸ್ಯ ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

. . . . . . . . .

ಆ.27 ರಂದು ಬೆಳಿಗ್ಗೆ ನಡೆದ ಗಣಪತಿ ಪ್ರತಿಷ್ಠೆ ನಡೆಯಿತು. ಸಾರ್ವಜನಿಕ ಗಣಪತಿ ಹವನ, ಗಂಟೆ 10 ರಿಂದ ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿ ಚುಚ್ಚುವ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಾರ್ವಜನಿಕರಿಗೆ,ಮಕ್ಕಳಿಗೆ ವಿವಿಧ ಸ್ಪರ್ಧೆ ಹಾಗೂ ಹಿಂದೂ ಬಾಂಧವರ ಮುಕ್ತ ವಾಲಿಬಾಲ್ ಪಂದ್ಯಾಟ ಬೆಳಿಗ್ಗೆ ಗಂಟೆ 10 ರಿಂದ ಆರಂಭವಾಗಲಿದೆ.

. . . . . . .

ಸಂಜೆ ಶಂಖಪಾಲ ಭಜನಾ ಸೇವಾ ಸಮಿತಿ ವಳಲಂಬೆ, ಶ್ರೀ ಕೃಷ್ಣ ಭಜನಾ ಮಂಡಳಿ ಗುತ್ತಿಗಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ವಿನೋದಾವಳಿ, ಶ್ರೀ ನಂದನ ಕಲಾ ಕುಟುಂಬ ಮೆಟ್ಟಿನಡ್ಕ ಇವರಿಂದ ಸಾಂಸ್ಕೃತಿಕ ಕಲಾ ವೈಭವ ಪ್ರದರ್ಶನಗೊಳ್ಳಲಿದೆ. ರಾತ್ರಿ ಗಂಟೆ 9 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪೂರ್ಣಾನಂದ ರಾಮ ಈಶ್ವರಮಂಗಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಆ.28 ರಂದು ಬೆಳಿಗ್ಗೆ 8.30 ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಲಿದೆ. ಬೆಳಿಗ್ಗೆ ಗಂಟೆ 10 ರಿಂದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ಮ ಮಹಾಪೂಜೆ, ಸಂಜೆ ಗಂಟೆ 3 ರಿಂದ ಶ್ರೀ ಗಣೇಶನ ಶೋಭಾಯಾತ್ರೆ ಆರಂಭವಾಗಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading