Ad Widget

ದೇವರಹಳ್ಳಿ : 29ನೇ ವರ್ಷದ ಗಣೇಶೋತ್ಸವ

ಏನೆಕಲ್ಲು ಗ್ರಾಮದ ದೇವರಹಳ್ಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 29ನೇ ವರ್ಷದ  ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 27ರಂದು ಶ್ರೀಹರಿ ಭಜನಾ ಮಂದಿರದಲ್ಲಿ ನಡೆಯಿತು.
ಆಗಸ್ಟ್ 27ರಂದು ಬೆಳಿಗ್ಗೆ ದೇವರ ವಿಗ್ರಹ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ, ಗಣಪತಿ ಹೋಮ, ಪೂರ್ಣಾವತಿ, ಮಕ್ಕಳಿಗೆ ವಿದ್ಯಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.
ಅಪರಾಹ್ನ ನಡೆದ ಧಾರ್ಮಿಕ ಉಪನ್ಯಾಸದಲ್ಲಿ ಸಾಮಾಜಿಕ ಕಾರ್ಯಕರ್ತ ರಾಜೇಶ್ ಮೇನಾಲ ಮಾತನಾಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಹರಿಶ್ಚಂದ್ರ ಮಾಣಿಬೈಲು ವಹಿಸಿದ್ದರು.
ವೇದಿಕೆಯಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಸುಜಾತ ಕಲ್ಲಾಜೆ, ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯ ದಿಲೀಪ್ ಉಪ್ಪಳಿಕೆ, ದೇವರಹಳ್ಳಿ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಮನೋರಮ ಮಾಣಿಬೈಲು,  ಏನೆಕಲ್ಲು ಸಹಕಾರಿ ಸಂಘದ ನಿರ್ದೇಶಕ ಗೋಪಾಲ ಗೌಡ ಮಾಣಿಬೈಲು, ಊರವರಾದ ಹರಿಶ್ಚಂದ್ರ ಉಪ್ಪಳಿಗೆ  ವೇದಿಕೆಯಲ್ಲಿ ಉಪಸ್ಥಿತರಿದ್ದರು. 
ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಮನೀಶ್ ಪದೇಲ, ಕಾರ್ಯದರ್ಶಿ ಚಂದ್ರಶೇಖರ ನೇರಳಗದ್ದೆ ಹಾಗೂ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.
ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಸಂಜೆ ಅದ್ದೂರಿ ಶೋಭಾಯಾತ್ರೆಯೊಂದಿಗೆ  ಗಣಪತಿ ವಿಸರ್ಜನೆ ನಡೆಯಿತು.
ದಿಲೀಪ್ ಉಪ್ಪಳಿಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮಿಥುನ್ ಹೊಪ್ಪಾಳೆ ಸ್ವಾಗತಿಸಿ,  ಶ್ರೀಮತಿ ಪುಷ್ಪ ಮತ್ತು ಶ್ರೀಮತಿ ಸ್ಮಿತಾ ಪದೇಲ ಕಾರ್ಯಕ್ರಮ ನಿರೂಪಿಸಿದರು.
ಯಜ್ಞೇಶ್ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading