Ad Widget

ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ

ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದ್ದು, ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕಾರ್ಯನಿರ್ವಾಹಣಾಧಿಕಾರಿಗಳಾದ ತಿಮ್ಮಯ್ಯ ಪಿಂಡಿಮನೆ, ನಿರ್ದೇಶಕರಾದ ಪುರುಷೋತ್ತಮ ಭಟ್, ತನಿಯಪ್ಪ ಗೌಡ, ಸಹಾಯಕ ಮಾರಾಟ ಮತ್ತು ಖರೀದಿ ಅಧಿಕಾರಿಯಾದ  ಜಯಾನಂದ ಜೆ ಇವರುಗಳು ಆ.30 ರಂದು ಮಂಗಳೂರಿನಲ್ಲಿ ನಡೆದ ಸಂಘದ 111ನೇ ವರ್ಷದ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು‌.
ಸಹಕಾರಿ ರಂಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ವಿಶಿಷ್ಟ ರೀತಿಯ ಜೇನು ಸಾಕಾಣೆ, ಜೇನು ಕೃಷಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ಉತ್ತಮವಾದ ಘಟಕವನ್ನು ಹೊಂದಿದ್ದು, ಅಲ್ಲದೆ ಜೇನು ಕೃಷಿಕರಿಂದಲೇ ಪಡೆಯುವ ಜೇನಿನಿಂದ ಹನಿಬೈಟ್ ಜೇನು ಚಾಕಲೇಟ್ ಹಾಗೂ ಪೆಪ್ಪರ್ ಚಾಕಲೇಟ್ ತಯಾರು ಮಾಡುತ್ತಿದ್ದು, ಇದನ್ನೆಲ್ಲಾ ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ವಿಶಿಷ್ಟ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಹಕಾರಿ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಯನ್ನು ಹಸ್ತಾಂತರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading