Ad Widget

ಕಂದ್ರಪ್ಪಾಡಿ : ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ದೇವಚಳ್ಳ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಗಸ್ಟ್ 31 ರಂದು ಕಂದ್ರಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಇದರ ಅಧ್ಯಕ್ಷರಾದ ಭರತ್ ಮುಂಡೋಡಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸಭಾಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ವಹಿಸಿದ್ದರು.
ಪಾರಿವಾಳವನ್ನು ಹಾರಿಸುವುದರ ಮುಖಾಂತರ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ,  ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿವಾಕರ ಮಂಡೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ಭವಾನಿ ಶಂಕರ ಮುಂಡೋಡಿ,  ಮಡಪ್ಪಾಡಿ ಪಿ.ಎ.ಸಿ.ಎಸ್ ಬ್ಯಾಂಕ್ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಜಯರಾಮ ಗೌಡ ಕಡ್ಲಾರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ವಾಣಿ ಕೆ.ಎಸ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವೀಣಾ ಕೆ, ಯುವ ಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರಾದ ವಿಜೇಶ್ ಹಿರಿಯಡ್ಕ, ದೇವಚಳ್ಳ ಯುವಕ ಮಂಡಲದ ಅಧ್ಯಕ್ಷರಾದ ಉದಯಕುಮಾರ್ ಮುಂಡೋಡಿ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ನೋಡಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಉಪಸಿತರಿದ್ದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತಿ ಹೊಂದಿದ ಅಂಚೆ ಇಲಾಖೆಯ ಸಿಬ್ಬಂದಿ ಪುರುಷೋತ್ತಮ ಪರಮಲೆ ಇವರನ್ನು ಸನ್ಮಾನಿಸಲಾಯಿತು. 
ಕಾರ್ಯಕ್ರಮದ ಯಶಸ್ಸಿಗೆ ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿ ಹಾಗೂ ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರು, ಊರಿನವರು ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading