Ad Widget

ನಡುಗಲ್ಲು : ಜವಾಹರ್ ಯುವಕ ಮಂಡಲದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಜವಾಹರ್ ಯುವಕ ಮಂಡಲ(ರಿ.) ನಡುಗಲ್ಲು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಆ.17 ಭಾನುವಾರದಂದು ನಡುಗಲ್ಲು ವಠಾರದಲ್ಲಿ ನಡೆಯಿತು.ಆಟೋಟ ಸ್ಪರ್ಧೆಗಳನ್ನು ಯುವಕ ಯುವತಿ ಮಂಡಲದ ವಠಾರದಲ್ಲಿ ಶ್ರೀ ಮಹಾ ಮೃತ್ಯುಂಜಯೇಶ್ವರ ಮತ್ತು ಶ್ರೀ ಪಾರ್ವತಿ ಸೇವಾ ಟ್ರಸ್ಟ್(ರಿ.) ನಡುಗಲ್ಲು ಇದರ ಅಧ್ಯಕ್ಷರಾದ ರಾಮಚಂದ್ರ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಅಂಗನವಾಡಿ ಮಕ್ಕಳಿಂದ ಹಿಡಿದು ಪುರುಷರ ಹಾಗೂ...

ಬಳ್ಪ : ಆ.31 ರಂದು ಉಚಿತ ವೈದ್ಯಕೀಯ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)ರೋಟರಿ ಕ್ಲಬ್ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಬಳ್ಪ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ, ವಿಕ್ರಮ ಯುವಕ ಮಂಡಲ ಬಳ್ಪ, ಧರ್ಮಶಾಸ್ತಾವೂ ಭಜನಾ ಮಂಡಳಿ ಬಳ್ಪ ಇವುಗಳ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ ಆ.31 ರಂದು ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ...
Ad Widget

ಇಂದು ಸುಳ್ಯದಲ್ಲಿ ಅದ್ದೂರಿ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ – ಸಮಾರೋಪ ಸಮಾರಂಭದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಗಿ

ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಇಂದು (ಆ.19) ಸುಳ್ಯದಲ್ಲಿ ನಡೆಯಲಿದೆ. ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರು ಆ.19...

ಸುಳ್ಯ : ಜೂನಿಯರ್ ಕಾಲೇಜಿನ ಅಮೃತ ಮಹೋತ್ಸವದ ಲೋಗೋ ಮತ್ತು ಮನವಿ ಪತ್ರ ಬಿಡುಗಡೆ – ನೂತನ ಕೊಠಡಿಗೆ ಭೂಮಿ ಪೂಜೆ

ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವ-2025 ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ ಕಾರ್ಯಕ್ರಮ ಆ.18 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ನೆರವೇರಿಸಿದರು.ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು "ಈ...

ಸೋಣಂಗೇರಿ : ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶಿಲಾನ್ಯಾಸ

ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ನೂತನ ಶ್ರೀ ಕೃಷ್ಣ ನೂತನ ಭಜನಾ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.18 ರಂದು ನಡೆಯಿತು. ಸುಮಾರು 40 ಲಕ್ಷ ರೂ ವೆಚ್ಚದಲ್ಲಿ ನೂತನ ಮಂದಿರ ನಿರ್ಮಾಣ ಆಗಲಿದೆ. ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಆ.15 ರಿಂದ 18 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಆ.18 ರಂದು ಬೆಳಿಗ್ಗೆ 10:20ರ ತುಲಾ...

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ಮಹಾಸಭೆ ಆ.17 ರಂದು ಯುವಕ ಮಂಡಲದ ಆವರಣದಲ್ಲಿ ನಡೆಯಿತು. ಈ ಸಭೆಯಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ‌ ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ ಇವರನ್ನು ಆಯ್ಕೆ ಮಾಡಲಾಯಿತು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿಯಲ್ಲಿ ಆಗಸ್ಟ್ 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರಮೇಶ್.ಎಮ್ ನೆರವೇರಿಸಿದರು.ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ ಎಂ ವಹಿಸಿದ್ದರು.ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಮಹೇಶ್ ಕುಮಾರ್ ಕರಿಕಳ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿತನುಡಿಗಳನ್ನು ಆಡಿದರು....

ಸುಳ್ಯ ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ – ರಾಜಿ ಮಾಡಿಕೊಳ್ಳಲು ಅ.07 ರವರೆಗೆ ಅವಕಾಶ

ನ್ಯಾಯಾಲಯದಲ್ಲಿ "ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ" ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಆರಂಭಗೊಂಡಿದ್ದು ಅಕ್ಟೋಬರ್ 7ರವರೆಗೆ ಅಭಿಯಾನ ನಡೆಯಲಿದೆ.ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ...

ಪಂಜ : ನೂತನ ಕಾಚು ಕುಚುಂಬ ದೈವಸ್ಥಾನದ ದಾರಂದ ಮುಹೂರ್ತ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಕಾಚು ಕುಚುಂಬ ದೈವದ ನೂತನ ದೈವಸ್ಥಾನದ ದಾರಾಂದ ಮುಹೂರ್ತ ಆ.18 ರಂದು ನಡೆಯಿತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾದ ಡಾ.ದೇವಿಪ್ರಸಾದ್ ಕಾನತ್ತೂರ್, ದೇಗುಲದ ಗೌರವ ಸಲಹೆಗಾರರಾದ ಹಾಗೂ ಹಲಸಿನ ಮರದ ಬಾಗಿಲು ದಾರಂದ ವನ್ನು ಕೊಡುಗೆಯಾಗಿ ನೀಡಿರುವ ಮಹೇಶ್ ಕುಮಾರ್ ಕರಿಕ್ಕಳ, ಗೌರವ ಸಲಹೆಗಾರರಾದ ಉಮೇಶ್...

ಪೆರಾಜೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ರೂ. 61.77 ಲಕ್ಷ ಲಾಭ, ಶೇ.9 ಡಿವಿಡೆಂಡ್ ಘೋಷಣೆ – ರಬ್ಬರ್ ವ್ಯಾಪಾರ ಮಾಡಿದ ಸದಸ್ಯರಿಗೆ ಕೆಜಿಗೆ. ರೂ1.50 ಪ್ರೋತ್ಸಾಹ ಧನ ನೀಡಲು ತೀರ್ಮಾನ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 8ನೇ ವರ್ಷದ 2024-25ರ ಸಾಲಿನ ವಾರ್ಷಿಕ ಮಹಾಸಭೆಯು ಆ. 17ರಂದು ಸಂಘದ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ಅವರು ಮಾತನಾಡಿ ಸಂಘವು ಈ ಸಲ ರೂ. 61.77 ಲಕ್ಷ ಲಾಭ ಗಳಿಸಿದ್ದು, ಶೇ.9 ಡಿವಿಡೆಂಡ್, ರಬ್ಬರ್ ವ್ಯಾಪಾರ ಮಾಡಿದ...
Loading posts...

All posts loaded

No more posts

error: Content is protected !!