Ad Widget

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹ ಪ್ರಶಸ್ತಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರೋತ್ಸಾಹ ಪ್ರಶಸ್ತಿ ದೊರಕಿದ್ದು, ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ| ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ವಿತರಿಸಿದರು.
ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ ರವರು ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ನಿರ್ದೇಶಕರಾದ ಶೇಷಪ್ಪ ಗೌಡ ಕಿರಿಭಾಗ, ಹಿಮ್ಮತ್.ಕೆ.ಸಿ, ರೇಗನ್ ಶೆಟ್ಯಡ್ಕ, ಗೋಪಾಲಕೃಷ್ಣ, ಕಮಲಾಕ್ಷ ಮುಳ್ಳುಬಾಗಿಲು, ಶ್ರೀಮತಿ ವೇದಾವತಿ ಮುಳ್ಳುಬಾಗಿಲು, ಡ್ಯಾನಿ ಯಳದಾಳು, ಶ್ರೀಮತಿ ಮೇನಕಾ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ತೀರ್ಥಕುಮಾರಿ, ಗೌರೀಶ್ ಮಲ್ಲಾಜೆ ಹಾಗೂ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading