Ad Widget

“ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಆಯ್ಕೆಯಾದ ಶ್ರೀಮತಿ ಲಲಿತಾ ಕುಮಾರಿ ರವರ ಪರಿಚಯ

ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಬೆಂಡೋಡಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಲಲಿತಾ ಕುಮಾರಿ ರವರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ…
ಶ್ರೀಮತಿ ಲಲಿತಾ ಕುಮಾರಿ ರವರು ಪುತ್ತೂರು ತಾಲೂಕಿನ ಕೊಯಿಲ ಗ್ರಾಮದ ಸಬಳೂರು ದಿ. ಕುಕ್ಕಪ್ಪ ಗೌಡ ಹಾಗೂ ದಿ. ಲಿಂಗಮ್ಮ ದಂಪತಿಗಳ ಕಿರಿಯ ಪುತ್ರಿಯಾಗಿ ಫೆ.01, 1966 ರಂದು ಜನಿಸಿದರು.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಬಳೂರು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆತೂರಿನಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಹಾಗೂ ಮಂಗಳೂರಿನ ರೋಸಾ ಮಿಸ್ತಿಕಾ ಮುಲ್ಲೂರು ಮಹಿಳಾ ಶಿಕ್ಷಣ ಶಿಕ್ಷಕ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕ ತರಬೇತಿಯನ್ನು ಪಡೆದ ಇವರು ಮಾ.06, 1994 ರಂದು ಕಂದ್ರಪ್ಪಾಡಿ ಸ.ಹಿ.ಪ್ರಾ ಶಾಲೆಗೆ ಸೇರ್ಪಡೆಗೊಂಡು ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿ 10 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ಜೂ.22, 1995 ರಲ್ಲಿ ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಗೆ ವರ್ಗಾವಣೆಗೊಂಡು ಅಲ್ಲಿ ಮೂರು ವರ್ಷಗಳ ಕಾಲ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇರಿದಂತೆ 22 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ 2016-17ನೇ ಸಾಲಿನಲ್ಲಿ ಮುಚ್ಚಲ್ಪಟ್ಟ ಬೆಂಡೋಡಿ ಸ.ಕಿ.ಪ್ರಾ ಶಾಲೆಗೆ ವರ್ಗಾವಣೆಗೊಂಡು ಕಳೆದ ಎಂಟು ವರ್ಷಗಳಿಂದ ಅಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬೆಂಡೋಡಿ ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಹಣದಿಂದ ನೋಟ್ ಬುಕ್, ಬ್ಯಾಗ್ ಗಳನ್ನು ಕೊಡುಗೆಯಾಗಿ ನೀಡುತ್ತಾ ಬಂದಿರುವ ಇವರು ತಮ್ಮ ಸ್ವಂತ ಖರ್ಚಿನಲ್ಲಿ ಕೈ ತೊಳೆಯುವ ಘಟಕ ನಿರ್ಮಿಸಿ ದಾನಿಗಳ ನೆರವಿನಿಂದ ಹಾಗೂ ಸ್ವಂತ ಹಣವನ್ನು ಸೇರಿಸಿ ಶಾಲಾ ಕಟ್ಟಡ ಸೌಂದರ್ಯ ನವೀಕರಣ, ಹಳೆ ವಿದ್ಯಾರ್ಥಿಗಳ ನೆರವಿನಿಂದ ಶಾಲಾ ಆಟದ ಮೈದಾನ ವಿಸ್ತರಣೆ, ಶಾಲಾಭಿವೃದ್ಧಿ ಸಮಿತಿಯ ಸಹಕಾರದಿಂದ ಶಾಲೆಯಲ್ಲಿ ಹೂವಿನ ತೋಟ ಹಾಗೂ ತರಕಾರಿ ತೋಟ ರಚನೆ, ಗ್ರಾಮ ಪಂಚಾಯತ್ ನ ಸಹಕಾರದಿಂದ ಆವರಣ ಗೋಡೆ ನಿರ್ಮಾಣ ಹಾಗೂ ಎಂ.ಆರ್.ಪಿ.ಎಲ್ ಸಂಸ್ಥೆಯ ವತಿಯಿಂದ ಸುಸಜ್ಜಿತ ಶೌಚಾಲಯ ನಿರ್ಮಾಣಗೊಳ್ಳಲು ಶ್ರಮಿಸಿರುವ ಇವರು ಹಳ್ಳಿ ಶಾಲೆಯ ಮಕ್ಕಳಿಗೆ ವಿಧಾನಸೌಧ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದರು. ಹಾಗೆಯೇ ಬಂಗ್ಲೆಗುಡ್ಡೆ ಶಾಲೆಗೆ ಬ್ಯಾಟರಿ ಕೊಡುಗೆ ನೀಡಿದ್ದಾರೆ.
ತೀರಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವುದನ್ನು ಹಾಗೂ ಇವರ ಈ ಸೇವೆಯನ್ನು ಗುರುತಿಸಿದ ಪ್ರಣವ ಫೌಂಡೇಶನ್ ಇವರನ್ನು ಸನ್ಮಾನಿಸಿ ಗೌರವಿಸಿದೆ.
ಇವರು ಕೊಲ್ಲಮೊಗ್ರು ಗ್ರಾಮದ ಕುಂಞೇಟಿ ಸೋಮಸುಂದರ ಅವರನ್ನು ವಿವಾಹವಾಗಿದ್ದಾರೆ. ಸೋಮಸುಂದರ ಅವರು ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಪುತ್ರ ಪವನ್.ಕೆ.ಎಸ್ ಡಿಪ್ಲೊಮಾ ವಿದ್ಯಾಬ್ಯಾಸ ಮಾಡಿದ್ದು, ಪ್ರಸ್ತುತ ಕೃಷಿಯಲ್ಲಿ ತೊಡಗಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading