Ad Widget

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮಣಿಪ್ರಕಾಶ್ ಕಡೋಡಿ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವುಗಳ ಸಹಯೋಗದೊಂದಿಗೆ ಸೆ.03 ರಂದು ನಡೆದ 14 ರಿಂದ 17 ವರ್ಷ ವಯೋಮಾನದ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಮಣಿಪ್ರಕಾಶ್ ಕಡೋಡಿ ರವರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರೀ ನಾರಾಯಣಗುರು ವಸತಿ ಶಾಲೆ ಪುಂಜಾಲಕಟ್ಟೆ ಇಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಚಂದ್ರಶೇಖರ ಕಡೋಡಿ ಹಾಗೂ ಭಾರತಿ ದಂಪತಿಗಳ ಪುತ್ರ.
ಇವರು ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ನ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರಿಂದ ಯೋಗ ತರಬೇತಿಯನ್ನು ಪಡೆಯುತ್ತಿದ್ದು, ಇವರು ಸುಳ್ಯ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾಲ್ತಾಜೆ ಹಾಗೂ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ.
ಈ ಬಾರಿ ಯೋಗ ವಿಭಾಗದಲ್ಲಿ ತಾಲೂಕಿನಿಂದ ಪ್ರಥಮ ಸ್ಥಾನ ಪಡೆದವರು ಮಾತ್ರ ಆಯ್ಕೆಯಾಗುವ ಅವಕಾಶವಿದ್ದು, ತೀವ್ರ ಪ್ರತಿಸ್ಪರ್ಧೆಯ ಮೂಲಕ ಇವರ ಆಯ್ಕೆ ಬಂಟ್ವಾಳ ತಾಲೂಕಿನಲ್ಲಿ ಗಮನ ಸೆಳೆದಿದ್ದು, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ರವರು ಗೌರವಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್, ದೈಹಿಕ ಶಿಕ್ಷಣ ಶಿಕ್ಷಕರು, ಗುರುಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading