Ad Widget

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ಉದ್ಘಾಟನೆ

ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ಸೆ.3 ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು   ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಶಿಕ್ಷಕ ಪ್ರವೀಣ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು, ಈ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ,  ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸುಳ್ಯ ಇದರ ಅಧ್ಯಕ್ಷ ಧನಂಜಯ,  ಎ ಗ್ರೇಡ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸುಳ್ಯ ಇದರ ಅಧ್ಯಕ್ಷ ಪದ್ಮನಾಭ, ನಾರಾಯಣ್, ಕುಮಾರಸ್ವಾಮಿ ವಿದ್ಯಾಲಯ ಸಂಚಾಲಕರಾದ ಚಂದ್ರಶೇಖರ್ ನಾಯರ್,  ಶಿವರಾಮ ಏನೇ ಕಲ್, ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಯೋಗನಾಥ ನಿರೂಪಿಸಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading