Ad Widget

ಅಡ್ತಲೆ : ಕೆ.ವಿ.ಜಿ ಪಾಲಿಟೆಕ್ನಿಕ್ ನ  ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ – ಬಿ.ಎಸ್.ಎಫ್ ಗೆ  ಆಯ್ಕೆಯಾದ ಕು‌.ಸುಶ್ಮಿತಾ ಅವರಿಗೆ ಸನ್ಮಾನ

ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ದಿನದ ಶಿಬಿರ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿ, ಸ್ಪಂದನ ಗೆಳೆಯರ ಬಳಗ(ರಿ.) ಅಡ್ತಲೆ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಆಶ್ರಯದಲ್ಲಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ಇವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ ಇಂದು ಅಡ್ತಲೆ ಶಾಲೆಯಲ್ಲಿ  ನಡೆಯಿತು.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಕಮಿಟಿ ‘ಬಿ’ ಇದರ ಆಡಳಿತಾಧಿಕಾರಿ ಶ್ರೀ ಭವಾನಿಶಂಕರ ಅಡ್ತಲೆ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅಣ್ಣಯ್ಯ.ಕೆ ಇವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೇಶವ ಅಡ್ತಲೆ, ಸದಸ್ಯರಾದ ಶ್ರೀಮತಿ ಸುಜಯಾ ಲೋಹಿತ್ ಮೇಲಡ್ತಲೆ, ಗೌರವ ಉಪಸ್ಥಿತರಾಗಿ ಅಡ್ತಲೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಮುಕುಂದ ಡಿ, ಅಡ್ತಲೆ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಹಿತ್ ಮೇಲಡ್ತಲೆ, ಸ್ಪಂದನ ಗೆಳೆಯರ ಬಳಗ(ರಿ.) ಅಡ್ತಲೆ ಇದರ ಅಧ್ಯಕ್ಷರಾದ ಶ್ರೀ ವಿನಯ್ ಬೆದ್ರುಪಣೆ, ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಹರಿಪ್ರಸಾದ್ ಅಡ್ತಲೆ, ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ಶ್ರೀ ಸುಜಿತ್ ಎಂ.ಎಸ್ ಇವರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ಇವರಿಗೆ ಹುಟ್ಟೂರ ಸನ್ಮಾನ ನಡೆಯಿತು.
ಕೆ.ವಿಜಿ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಪ್ರಾಂಶುಪಾಲರು ಮತ್ತು ಎನ್.ಎಸ್.ಎಸ್ ಅಧಿಕಾರಿಗಳು ಸನ್ಮಾನಿಸಿದರು.
ಎನ್.ಎಸ್.ಎಸ್ ಯೋಜನಾಧಿಕಾರಿ ಶ್ರೀ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಇನ್ನೋರ್ವ ಯೋಜನಾಧಿಕಾರಿ ಶ್ರೀ ಸುನಿಲ್ ಕುಮಾರ್ ಇವರು ಸ್ವಾಗತಿಸಿ ಗೌರವ ಸಲಹೆಗಾರರಾದ ಶ್ರೀ ಶಶಿಕುಮಾರ್ ಉಳುವಾರು ಧನ್ಯವಾದಗೈದರು.
ಶ್ರೀ ರಂಜಿತ್ ಅಡ್ತಲೆ ಕಾರ್ಯಕ್ರಮವನ್ನು ನಿರೂಪಿಸಿದರು.
ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಶಿಬಿರಾರ್ಥಿಗಳಿಂದ ಶಾಲಾ ಆವರಣ‌ ಸ್ವಚ್ಛತಾ ಶ್ರಮದಾನ ನಡೆಯಿತು.
ಬಳಿಕ ಮನೋರಂಜನೆಗಾಗಿ ಹಗ್ಗಜಗ್ಗಾಟ ಸ್ಪರ್ಧೆ ಏರ್ಪಡಿಸಲಾಗಿತ್ತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading