Ad Widget

ಅರಂತೋಡು : ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ – ಶಿಕ್ಷಕರಿಗೆ ಸನ್ಮಾನ

ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಸೆ.05 ರಂದು ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

. . . . . . . . .

ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್‌ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ಚೊಕ್ಕಾಡಿ ದಿಕ್ಕೂಚಿ ಭಾಷಣ ಮಾಡಿದರು.

. . . . . . .

ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಗ್ರಾ.ಪಂ. ಉಪಾಧ್ಯಕ್ಷೆ ಭವಾನಿ ಚಿಟ್ಟನ್ನೂರು, ಸದಸ್ಯೆ ಮಾಲಿನಿ, ತಹಶೀಲ್ದಾರ್ ಮಂಜುಳಾ, ತಾ.ಪಂ. ಇ.ಒ. ರಾಜಣ್ಣ, ಅರಂತೋಡು ವಿದ್ಯಾಸಂಸ್ಥೆಯ ಸಂಚಾಲಕ ಕೆ.ಆರ್.ಗಂಗಾಧರ್, ಅರಂತೋಡು ಎನ್‌.ಎಂ.ಪಿ.ಯು.ಸಿ.ಪ್ರಾಂಶುಪಾಲ ಸುರೇಶ್ ವಾಗ್ಲೆ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತೀನ್ ಪ್ರಭು, ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ಹಾಗೂ ಶಿಕ್ಷಕರುಗಳ ವಿವಿಧ ಸಂಘಗಳ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು. ವಿವಿಧ ಶಾಲೆಯ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading