Ad Widget

ಸುಳ್ಯ : ತಾಲೂಕು ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಸೆಪ್ಟೆಂಬರ್ ೧೦ ರಂದು ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಮಂಜುಳಾ ಎಂ., ನಗರ ಪಂಚಾಯತ್ ಅಧ್ಯಕ್ಷ ಶಶಿಕಲಾ ನೀರಬಿದಿರೆ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ ಮುಸ್ತಾಫ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ ಇದರ ಅಧ್ಯಕ್ಷ ಕೃಷ್ಣಕುಮಾರ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಇದರ ಕಾರ್ಯದರ್ಶಿ ನವೀನ್ ಕುಮಾರ್ ಎಸ್, ನಗರ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾಮ ಆಡಳಿತಾಧಿಕಾರಿ ಕವನ ಪ್ರಾರ್ಥಿಸಿದರು. ಶಿರಸ್ತೆದಾರ್ ಚಂದ್ರಶೇಖರ ಎಚ್.ಎಂ. ಸ್ವಾಗತಿಸಿ, ನಿರೂಪಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಕಾರ್ಯದರ್ಶಿ ನವೀನ್ ಕುಮಾರ್ ಎಸ್ ವಂದಿಸಿದರು. 

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading