Ad Widget

ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ; “ವಿದ್ಯಾರ್ಥಿಗಳಿಂದಲೇ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಗಲಿ” : ಸದಾನಂದ ಮಾವಾಜಿ

ಸುಬ್ರಹ್ಮಣ್ಯ ಸೆಪ್ಟಂಬರ್ 16 : “ಕರ್ನಾಟಕ ರಾಜ್ಯ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಳೆದ ಐದು ವರ್ಷಗಳಿಂದ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಬೇರೆ ಬೇರೆ ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದೇವೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಅವರಿಗೆ ವಾರ್ತೆ ಹಾಗೂ ಸಂಸ್ಕೃತಿಯನ್ನ ಉಣ ಬಡಿಸಿದಾಗ ಅದು ಮುಂದಿನ ತಲೆಮಾರಿನವರೆಗೂ ನಿರಂತರವಾಗಿ ಸಾಗಲು ಪ್ರೇರೇಪಣೆಯಾಗುತ್ತದೆ. ಹಾಗೆಯೇ ವಿದ್ಯಾರ್ಥಿಗಳಿಂದಲೇ ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಗಲಿ ಎನ್ನು ಉದ್ದೇಶದಿಂದ ಎರಡು ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ” ಎಂದು ಕರ್ನಾಟಕ ರಾಜ್ಯ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ನುಡಿದರು.
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಮಂಗಳವಾರ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಹಾಗೂ ಸ್ಪರ್ಧೆಗಳನ್ನು ಆಯೋಜಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ನಿವೃತ್ತದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಏನಕಲ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾಮ ಗೌಡ ಸಮಿತಿ ಅಧ್ಯಕ್ಷ ಡಾl ಎ ಎ ತಿಲಕ್, ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷೇ ತ್ರಿವೇಣಿ ದಾಮ್ಲೆ, ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಕಾರ್ಯಪ್ಪ ಪಿ.ಎಸ್, ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ, ಲತಾ ಪ್ರಸಾದ್ ಕುತ್ಪಾಜೆ ಹಾಗೂ ಚಂದ್ರಾವತಿ ಬಡ್ಡಡ್ಕ ಉಪಸ್ಥಿತರಿದ್ದರು.
ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸೌಮ್ಯ ದಿನೇಶ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಚಂದ್ರಶೇಖರ ಪೆರಾಲು ಸ್ವಾಗತಿಸಿ ಲೋಕೇಶ್ ಊರುಬೈಲು ವಂದಿಸಿದರು.
ತದನಂತರ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading