Ad Widget

ಸುಬ್ರಹ್ಮಣ್ಯ : ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ “ವಿಶ್ವ ನಿರ್ಮಾತೃ ವಿಶ್ವಕರ್ಮ ಜಯಂತಿ” ಕಾರ್ಯಕ್ರಮವು ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ರವರ ಅಧ್ಯಕ್ಷತೆಯಲ್ಲಿ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.
ಜಿಲ್ಲಾ ಒ.ಬಿ.ಸಿ ಮೋರ್ಚಾದ ಅಧ್ಯಕ್ಷರಾದ ಮಹೇಶ್ ಜೋಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಪನ್ಯಾಸಕರಾದ ನಳಿನಾಕ್ಷಿ ಕಲ್ಮಡ್ಕ ರವರು “ವಿಶ್ವಕರ್ಮ ದಿನಾಚರಣೆಯ ಮಹತ್ವ” ವನ್ನು ತಿಳಿಸಿದರು.
ರಾಜ್ಯ ಒ.ಬಿ.ಸಿ ಕಾರ್ಯದರ್ಶಿಗಳಾದ ಆರ್.ಸಿ ನಾರಾಯಣ ರೆಂಜ ಅವರು ಮಾತನಾಡಿ “ವಿಶ್ವಕರ್ಮ ಸಮಾಜದ ಕೊಡುಗೆ ಮಹತ್ತರವಾದುದು” ಎಂದರು.
ಈ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ ಮೂವರು ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಪ್ರತಿಭಾ ಪುರಸ್ಕಾರ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕಾರ್ತಿಕ್ ಸುಬ್ರಹ್ಮಣ್ಯ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಪ್ರದೀಪ್ ರೈ, ಜಿಲ್ಲಾ ಒ.ಬಿ.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ, ಶಶಿಧರ ಕಲ್ಮಂಜ, ಜಿಲ್ಲಾ ಒ.ಬಿ.ಸಿ ಕಾರ್ಯದರ್ಶಿ ಚಂದ್ರಶೇಖರ ಪನ್ನೆ ಹಾಗೂ ಸದಾನಂದ ಆಚಾರ್ಯ ಉಪಸ್ಥಿತರಿದ್ದರು.
ಒ.ಬಿ.ಸಿ ಮೋರ್ಚಾದ ಮಂಡಲ ಅಧ್ಯಕ್ಷರಾದ ಗಿರೀಶ್ ಪೈಲಾಜೆ ಸ್ವಾಗತಿಸಿ, ಕಾರ್ತಿಕ್ ಸುಬ್ರಹ್ಮಣ್ಯ ಪ್ರಾರ್ಥಿಸಿ, ಒ.ಬಿ.ಸಿ ಮಂಡಲ ಪ್ರಧಾನ ಕಾರ್ಯದರ್ಶಿ ಅಶೋಕ್ ಅಡ್ಕಾರ್ ವಂದಿಸಿದರು.
ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್ ಚಾರ್ಮತ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading