ಕಲ್ಮಕಾರು : “ಪಂಚಸಪ್ತತಿ-2025” 75 ದಿನಗಳ ಸ್ವಚ್ಚತಾ ಅಭಿಯಾನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಸರ್ವೋದಯ ಯುವಕ ಮಂಡಲ(ರಿ.) ಕಲ್ಮಕಾರು ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ-2025” ಅಭಿಯಾನದ ಅಡಿಯಲ್ಲಿ ಮುಂದಿನ 75 ದಿನಗಳ ಕಾಲ ಸ್ವಚ್ಚತೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಅಭಿಯಾನದ ಮೊದಲ ಸ್ವಚ್ಛತಾ ಕಾರ್ಯಕ್ರಮವು ಅ.10 ರಂದು ಕಲ್ಮಕಾರಿನಲ್ಲಿ ನಡೆಯಿತು.
ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರಾದ ದಿನೇಶ್ ಹಾಲೆಮಜಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಕಾಲೋನಿಗೆ ತೆರಳಿ ಅಲ್ಲಿನ ಸ್ಥಳೀಯರೊಂದಿಗೆ ಸ್ವಚ್ಛತಾ ಅಭಿಯಾನವನ್ನು ನಡೆಸಿ ಸ್ವಚ್ಛತಾ ಜಾಗೃತಿಯ ಬಗ್ಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading