Ad Widget

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ : ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟವು ಅ. 24ರಂದು ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜರಗಿತು. ಈ ಕ್ರೀಡಾಕೂಟದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ರಾಧಾಕೃಷ್ಣ ಬೊಳ್ಳೂರು ಅವರು ಧ್ವಜಾರೋಹಣ ಮಾಡಿ ಕ್ರೀಡಾಪಟುಗಳು ಉತ್ತಮವಾಗಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ಹಾಗೂ ಸಮಾನತೆಯಿಂದ ಉತ್ತಮವಾಗಿ ಕ್ರೀಡಾಕೂಟವನ್ನು ನಡೆಸಿ ಎಂದು ಶುಭ ಹಾರೈಸಿದರು. ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾಗಿರುವ ವಿಶ್ವನಾಥ ಮೂಕಮಲೆ ಇವರು
ಕ್ರೀಡಾಕೂಟವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯವರಾದ ಸೂಫಿ ಪೆರಾಜೆ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚೊಕ್ಕಾಡಿ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯಾಗಿರುವ ತೇಜಸ್ವಿ ಕಡಪಳ, ಶಿಕ್ಷಣ ಸಂಯೋಜಕರಾದ ಉದಯಕುಮಾರ್, ದೇವಚಳ್ಳ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಭಾಕರ ಎಂ, ಬೆಳ್ಳಾರೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿರುವ ಅನುರಾಧ, ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿಯ ಮುಖ್ಯ ಗುರುಗಳಾದ ಸಂಕೀರ್ಣ ಚೊಕ್ಕಾಡಿಯವರು ಸರ್ವರನ್ನು ಸ್ವಾಗತಿಸಿದರು, ಸಹಶಿಕ್ಷಕಿ ಸಂಧ್ಯಾಕುಮಾರಿ ಇವರು ಧನ್ಯವಾದ ಸಮರ್ಪಣೆಯನ್ನು ಮಾಡಿದರು. ಬೆಳ್ಳಾರೆ ಕೆ ಪಿ ಎಸ್ ನ ದೈಹಿಕ ಶಿಕ್ಷಕಿಯಾಗಿರುವ ಶ್ರೀಮತಿ ಪುಷ್ಪಾವತಿ ಇವರು ಕಾರ್ಯಕ್ರಮ ನಿರೂಪಿಸಿದರು.
ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ 17ರ ವಯೋಮಿತಿಯ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ ಇವರು ಸಮಗ್ರ ಪ್ರಶಸ್ತಿ ಯನ್ನು ಗಳಿಸಿಕೊಂಡರು. 17ರ ವಯೋಮಿತಿಯ ಹುಡುಗರ ವಿಭಾಗದ ರನ್ನರ್ ಅಪ್ ಪ್ರಶಸ್ತಿಯನ್ನು ಕೆ.ಪಿ.ಎಸ್. ಬೆಳ್ಳಾರೆ ಪ್ರೌಢಶಾಲೆ ಮತ್ತು ಹುಡುಗಿಯರ ವಿಭಾಗದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಗಳಿಸಿಕೊಂಡಿತು. 14ರ ವಯೋಮಿತಿಯ ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಸಮಗ್ರ ಪ್ರಶಸ್ತಿಯನ್ನು, ಬಾಲಕರ ಮತ್ತು ಬಾಲಕಿಯರ ವಿಭಾಗದ ರನ್ನರ್ ಅಪ್ ಪ್ರಶಸ್ತಿಯನ್ನು ಕೆ.ಪಿ.ಎಸ್. ಬೆಳ್ಳಾರೆ ಪ್ರೌಢಶಾಲೆ ಪಡೆದುಕೊಂಡಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading