Ad Widget

ನಾಳೆ (ಅ‌.26) ಮಂಡೆಕೋಲಿನಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಹಾಗೂ ಮಂಡೆಕೋಲು, ಕಲ್ಲಡ್ಕ, ಪೇರಾಲು ಎ&ಬಿ ಒಕ್ಕೂಟ ಇವುಗಳ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 26ನೇ ಆದಿತ್ಯವಾರದಂದು ಬೆಳಿಗ್ಗೆ 8:00 ಗಂಟೆಯಿಂದ 21ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಪೂರ್ವಾಹ್ನ 11:15ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸುಳ್ಯ ತಾಲೂಕು ಪ್ರಗತಿಬಂಧು ಹಾಗೂ ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ಅಧ್ಯಕ್ಷತೆ ವಹಿಸಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಖ್ಯಾತ ವಾಗ್ಮಿಗಳಾದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅಭ್ಯಾಗತರಾಗಿ ದ.ಕ 2ಜಿಲ್ಲಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಇದರ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ, ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಅಜ್ಜಾವರ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಶಿವಪ್ರಕಾಶ್ ಅಡ್ಪಂಗಾಯ, ಪೆರಾಜೆ ವನಶಾಸ್ರಾರ ದೇವಸ್ಥಾನದ ಪ್ರಧಾನ ಅರ್ಚಕರಾದ ಉದಯ ಕುಮಾರ್ ಆಚಾರ್, ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ಪೂರ್ವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ ಹಾಗೂ ಅಜ್ಜಾವರ ವಲಯ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ವಲಯಾಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ ಉಪಸ್ಥಿತರಿರಲಿದ್ದಾರೆ.
ಅಪರಾಹ್ನ 1:30 ರಿಂದ ಜಾನಪದ ಕಲಾವಿದ ವಿಜಿತ್ ಮೈತಡ್ಕ ಮತ್ತು ತಂಡದವರಿಂದ ಭಕ್ತಿಗಾನ ವೈಭವ ಹಾಗೂ ಅಪರಾಹ್ನ 2:30 ರಿಂದ ಯೋಜನೆಯ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading