Ad Widget

ನ.03ರಿಂದ ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ನೆಟ್‌ಬಾಲ್ ಸ್ಪರ್ಧೆ

ಸುಬ್ರಹ್ಮಣ್ಯ : “ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನೆಟ್‌ಬಾಲ್ ಸ್ಪರ್ಧೆ 2025-26 ನ.03ರಿಂದ ಸುಬ್ರಹ್ಮಣ್ಯದ ಎಸ್‌.ಎಸ್‌.ಪಿ.ಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ತಿಳಿಸಿದರು. ಅವರು ಕಾಲೇಜಿನಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
“ನ.03ರಂದು ಮಧ್ಯಾಹ್ನ 1:00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಉದ್ಘಾಟಿಸುವರು.
ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಧ್ವಜವಂದನೆ ಸ್ವೀಕರಿಸುವರು.
ಶಾಸಕರಾದ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಸುಜಾತ ಕಲ್ಲಾಜೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ” ಎಂದರು.
“ನ.03ರಿಂದಲೇ ಸ್ಪರ್ಧೆಗಳು ಆರಂಭಗೊಂಡು, 05ರ ವರೆಗೆ ನಡೆಯಲಿದೆ. ನ.05ರಂದು ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸುಮಾರು 50ಕ್ಕೂ ಅಧಿಕ ತಂಡಗಳು ಆಗಮಿಸುವ ನಿರೀಕ್ಷೆ ಇದೆ. ಐದು ಅಂಕಣಗಳ ಮೂಲಕ ಸ್ಪರ್ಧೆಗಳನ್ನು ನಡೆಸಲಾಗುತ್ತದೆ, ಜೊತೆಗೆ ಹೆಚ್ಚುವರಿ ಎರಡು ಅಂಕಣಗಳನ್ನು ಇಂಟರ್‌ಲಾಕ್ ಮೈದಾನದಲ್ಲೂ ಸಿದ್ಧಪಡಿಸಲಾಗುವುದು” ಎಂದರು.
“ದಕ್ಷಿಣ ಕನ್ನಡ ಜಿಲ್ಲಾ  ತಂಡದಲ್ಲಿ ಸುಬ್ರಹ್ಮಣ್ಯದ ಎಸ್‌.ಎಸ್‌.ಪಿ.ಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಡಲಿದ್ದಾರೆ. ಸ್ಪರ್ಧಾಳುಗಳಿಗೆ, ದೈಹಿಕ ಶಿಕ್ಷಣ ಶಿಕ್ಷಕರು, ಮಾರ್ಗದರ್ಶಕರು, ನಿರ್ಣಾಯಕರಿಗೆ ಹಾಗೂ ಕ್ರೀಡಾಕೂಟಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ವಸತಿ, ಊಟ-ಉಪಹಾರದ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು” ಎಂದು ಕ್ರೀಡಾಕೂಟದ ಬಗ್ಗೆ ವಿವರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ತ್ರಿವೇಣಿ ದಾಮ್ಲೆ, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ರಾಧಾಕೃಷ್ಣ ಸಿ, ಹಿರಿಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಲೋಕೇಶ್.ಬಿ.ಎನ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading