Ad Widget

ಶೇಣಿ : ಶ್ರೀಕೃಷ್ಣ ಭಜನಾ ಮಂಡಳಿಯ ವಾರ್ಷಿಕೋತ್ಸವ – ತರಬೇತುದಾರ ಸಂತೋಷ್ ಕುಳ್ಳಾಜೆಯವರಿಗೆ ಸನ್ಮಾನ –
“ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ” – ಈಶ್ವರ್ ವಾರಣಾಶಿ

“ಶಾಲಾ ಮಕ್ಕಳು ಕೇವಲ ಪಠ್ಯ ಚಟುವಟಿಕೆಗಳಲ್ಲಿ ಮಾತ್ರ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಮುಖ್ಯವಲ್ಲ, ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ. ಭಜನೆಯಿಂದ ದೈಹಿಕವಾಗಿ, ಮಾನಸಿಕವಾಗಿ ನೆಮ್ಮದಿಯನ್ನು ಕಾಣಲು ಸಾಧ್ಯ” ಎಂದು ಪತ್ರಕರ್ತ ಈಶ್ವರ ವಾರಣಾಶಿ ಹೇಳಿದರು.
ಇವರು ಶ್ರೀಕೃಷ್ಣ ಭಜನಾ ಮಂಡಳಿ ಶೇಣಿ ಇದರ ವಾರ್ಷಿಕೋತ್ಸವ ಮತ್ತು ಭಜನಾ ತರಬೇತುದಾರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ನ.2ರಂದು ಸನ್ಮಾನ ನೆರವೇರಿಸಿ ಮಾತನಾಡಿದರು.
ಎಂ.ಎಸ್.ಕೆ ಗೆಳೆಯರ ಬಳಗ ಶೇಣಿ ಇದರ ಆಶ್ರಯದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಸ್.ಕೆ ಗೆಳೆಯರ ಬಳಗದ ಅಧ್ಯಕ್ಷ ಸುಬ್ರಹ್ಮಣ್ಯ ಸೂರೆಂಗಿ ವಹಿಸಿದ್ದರು. ಶೇಣಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ್ ಪಾಡಾಜೆ ಮುಖ್ಯ ಅತಿಥಿಯಾಗಿದ್ದರು. ಭಜನಾ ತರಬೇತುದಾರರಾದ ಸಂತೋಷ್ ಕುಳ್ಳಾಜೆಯವರನ್ನು ಸನ್ಮಾನಿಸಲಾಯಿತು. ಎಂ.ಎಸ್.ಕೆ. ಗೆಳೆಯರ ಬಳಗದ ಸ್ಥಾಪಕ ಅಧ್ಯಕ್ಷ ವಿಶ್ವನಾಥ ಮೋಟುಕಾನ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಭಜನಾರ್ಥಿ ನಿಶಾ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಎಂ.ಎಸ್.ಕೆ ಗೆಳೆಯರ ಬಳಗದ ಸದಸ್ಯರು, ಭಜನಾ ಮಂಡಳಿ ಸದಸ್ಯರು ಹಾಗೂ ಸ್ಥಳೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading