Ad Widget

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮರ್ಕಂಜದ ಕು.ಪವಿತ್ರಾ ನಿಧನ

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕು.ಪವಿತ್ರಾ ಎಂಬುವವರು ಇಂದು(ನ.10) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮರ್ಕಂಜ ಗ್ರಾಮದ ಮಂಜೋಳ್ ಕಜೆ ದಿ.ಚಿನ್ನಪ್ಪ ಗೌಡ ಎಂಬುವವರ ಪುತ್ರಿಯಾದ ಇವರು ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇವರು ಕಳೆದ 6 ತಿಂಗಳ ಹಿಂದೆ ಟಿ.ಬಿ ಖಾಯಿಲೆ ಬಾಧಿಸಿ ಚಿಕಿತ್ಸೆ ಪಡೆಯುತ್ತಿದ್ದರೆನ್ನಲಾಗಿದ್ದು, 6 ದಿನಗಳ ಹಿಂದೆ ಕಾಯಿಲೆ ಉಲ್ಬಣಗೊಂಡು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇವರಿಗೆ 24 ವರ್ಷ ವಯಸ್ಸಾಗಿತ್ತು.
ಮೃತರು ತಾಯಿ ದಮಯಂತಿ, ಸಹೋದರಿ ಸುಶ್ಮಿತಾ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading