Ad Widget

ಪಂಜ : ಡಿ.03 ರಿಂದ 05 ರವರೆಗೆ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶವು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಡಿಸೆಂಬರ್ 03 ಬುಧವಾರದಿಂದ 05 ಶುಕ್ರವಾರದವರೆಗೆ ನಡೆಯಲಿದ್ದು, ಡಿ.03 ಬುಧವಾರದಂದು ಪೂರ್ವಾಹ್ನ 8:00 ಗಂಟೆಯಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ ಹಾಗೂ ಆಶ್ಲೇಷ ಬಲಿ ನಡೆಯಲಿದ್ದು, ಮದ್ಯಾಹ್ನ 12:00 ಗಂಟೆಯಿಂದ ಹೋಮದ ಪೂರ್ಣಾಹುತಿ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ, ಸಂಜೆ 5:00 ಗಂಟೆಯಿಂದ ದುರ್ಗಾಪೂಜೆ, ಸುದರ್ಶನ ಹೋಮ, ಅಘೋರ ಹೋಮ ಹಾಗೂ ವನದುರ್ಗಾ ಹೋಮ ನಡೆದು ರಾತ್ರಿ 8:30 ರಿಂದ ಪ್ರಸಾದ ವಿತರಣೆ ಹಾಗೂ ಅನ್ನಪ್ರಸಾದ ವಿತರಣೆ ನಡೆಯಲಿದೆ.
ಡಿ.04 ಗುರುವಾರದಂದು ಸಂಜೆ 5:00 ಗಂಟೆಯಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಪ್ರಾಕಾರ ಬಲಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಡಿ.05 ಶುಕ್ರವಾರದಂದು ಪೂರ್ವಾಹ್ನ 7:30 ರಿಂದ ಮಹಾಗಣಪತಿ ಹೋಮ ಹಾಗೂ ಕಲಶ ಪೂಜೆ ನಡೆಯಲಿದ್ದು, 10:29 ರಿಂದ 11:30ರ ತನಕ ನಡೆಯುವ ಮಕರ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ, ತಂಬಿಲ ಸೇವೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading