Ad Widget

ವಳಲಂಬೆ : ನ.16 ರಂದು “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” – ಸಮ್ಮೇಳನಾಧ್ಯಕ್ಷರಾಗಿ ಎ.ಕೆ ಹಿಮಕರ – ಕೃತಿ ಬಿಡುಗಡೆ, ವಿಚಾರಗೋಷ್ಠಿ, ಗೀತ ಗಾಯನ, ವಿದ್ಯಾರ್ಥಿ ಕವಿಗೋಷ್ಠಿ ಹಾಗೂ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಹಾಗೂ ಸಮಾಜ ಸೇವಾ ತಂಡಗಳಿಗೆ “ಸಿರಿಗನ್ನಡ ಸನ್ಮಾನ”

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇದರ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.

ಪೂರ್ವಾಹ್ನ 9:00 ಗಂಟೆಗೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ.ಕೆ ಬೆಳ್ಯಪ್ಪ ಗೌಡ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಪೂರ್ವಾಹ್ನ 9:30ಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ| ಎಂ.ಪಿ ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ.
ದೈಹಿಕ ಶಿಕ್ಷಕರುಗಳಾದ ಅನಿಲ್ ಹಾಗೂ ರಮೇಶ್ ಕರಂಗಲ್ಲು ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ.
ಪೂರ್ವಾಹ್ನ 9:45ಕ್ಕೆ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಪುಸ್ತಕ ಪ್ರದರ್ಶನದ ಉದ್ಘಾಟನೆ ನೆರವೇರಿಸಲಿದ್ದಾರೆ.

ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಹಿರಿಯ ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.
ಸಾಹಿತಿ, ಸಂಶೋಧಕರು ಹಾಗೂ ಕಿನ್ನಿಗೋಳಿ ಪಾಂಪೈ ಕಾಲೇಜಿನ ಪ್ರಾಂಶುಪಾಲರಾದ ಡಾ.ಪುರುಷೋತ್ತಮ.ಕೆ.ವಿ ಕರಂಗಲ್ಲು ರವರು ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ರವರು ಹೊಸ ಕೃತಿ ಬಿಡುಗಡೆಗೊಳಿಸಲಿದ್ದು, ಬಿಡುಗಡೆಗೊಳ್ಳಲಿರುವ ಕೃತಿ ಪತ್ರಕರ್ತರಾದ ಮಹೇಶ್ ಪುಚ್ಚಪ್ಪಾಡಿ ರವರ “ಸಂತೆಯಲ್ಲಿ ಸಾಗುತ್ತಿರುವ ನಾವು…”
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಎಂ.ಪಿ ಶ್ರೀನಾಥ್ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಆಶಯ ನುಡಿ ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮಿತ್ರಾ ಮೂಕಮಲೆ ಹಾಗೂ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಉಪಸ್ಥಿತರಿರಲಿದ್ದಾರೆ.
ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ರವರು ಸ್ವಾಗತಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ಪ್ರಸ್ತಾವನೆ ನೆರವೇರಿಸಲಿದ್ದಾರೆ.
ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರೈತಗೀತೆ ಹಾಡಲಿದ್ದಾರೆ.
ಮಾಧವ ಮೂಕಮಲೆ ಅವರು ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಲಿದ್ದು, ಶ್ರೀಮತಿ ಚಂದ್ರಮತಿ.ಕೆ ಕಾರ್ಯಕ್ರಮ ನಿರೂಪಿಸಿ ಕೇಶವ.ಹೆಚ್.ಬಿ ಹೊಸೊಳಿಕೆ ವಂದನಾರ್ಪಣೆ ಮಾಡಲಿದ್ದಾರೆ.

ಮದ್ಯಾಹ್ನ 12:00 ಗಂಟೆಯಿಂದ 1:00 ಗಂಟೆಯವರೆಗೆ ವಿಚಾರಗೋಷ್ಠಿ ನಡೆಯಲಿದ್ದು, ಬಾಳಿಲ ವಿದ್ಯಾಭೋದಿನಿ ಪ್ರೌಢಶಾಲಾ ನಿವೃತ್ತ ಮುಖ್ಯ ಗುರುಗಳಾದ ಶಿವರಾಮ ಶಾಸ್ತ್ರಿ ಆಚಳ್ಳಿ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.
ಕೃಷಿ ವಿಜ್ಞಾನಿಗಳು ಹಾಗೂ ಅವೆಂಚುರ ಆಗ್ರೋ ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕರಾದ ಡಾ| ಬಿ.ಕೆ ವಿಶುಕುಮಾರ್ “ಕೃಷಿ ಸಮಸ್ಯೆಗಳು ಮತ್ತು ಪರಿಹಾರಗಳು” ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದು, ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಧಿರೇನ್ ಪರಮಲೆ “ಧರ್ಮ ಮತ್ತು ಸಾಹಿತ್ಯ” ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ವಿಜೇಶ್ ಹಿರಿಯಡ್ಕ ಸ್ವಾಗತಿಸಿ ಮಹೇಶ್ ಪುಚ್ಚಪ್ಪಾಡಿ ಕಾರ್ಯಕ್ರಮ ನಿರೂಪಿಸಿ ರಮೇಶ್ ಮೆಟ್ಟಿನಡ್ಕ ವಂದಿಸಲಿದ್ದಾರೆ.

ಮದ್ಯಾಹ್ನ 1:00 ಗಂಟೆಯಿಂದ 1:30 ರವರೆಗೆ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಗುತ್ತಿಗಾರು, ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಳಲಂಬೆ, ಸರ್ಕಾರಿ ಪ್ರೌಢಶಾಲೆ ಎಲಿಮಲೆ ಹಾಗೂ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಸಂಸ್ಥೆಗಳು ಭಾಗವಹಿಸಲಿವೆ.
ರಂಜಿತ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

ಅಪರಾಹ್ನ 2:00 ಗಂಟೆಯಿಂದ 2:45 ರವರೆಗೆ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿ ಧೃತಿ.ಎಂ.ಜೆ ಮರಕತ ಇವರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ನಡೆಯಲಿದ್ದು, ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ 8ನೇ ತರಗತಿಯ ನಿತಾಶ್ರೀ.ಕೆ.ಆರ್, 10ನೇ ತರಗತಿಯ ಸುಜನ್.ಎ.ಜೆ, ಎಣ್ಮೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಅಮಿನಾ ಮರ್ಜಾನ, ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ 10ನೇ ತರಗತಿಯ ಧನ್ವಿತಾ, ಎಣ್ಮೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಹಂಸಿನಿ, ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಮೇಘ.ಹೆಚ್.ಕೆ, 10ನೇ ತರಗತಿಯ ಸುಶ್ಮಿತಾ, ಎಣ್ಮೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ಯಜ್ಞ ಹಾಗೂ ಪಂಜ ಸರ್ಕಾರಿ ಪದವಿಪೂರ್ವ ಕಾಲೇಜಿನ 8ನೇ ತರಗತಿಯ ಜಾಹ್ನವಿ.ಎಂ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದು, ಕುಶಾಲಪ್ಪ ತುಂಬತ್ತಾಜೆ ಸ್ವಾಗತಿಸಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿ ತೇಜಪ್ಪ ಸಂಪ್ಯಾಡಿ ಧನ್ಯವಾದ ಸಮರ್ಪಣೆ ಮಾಡಲಿದ್ದಾರೆ.

ಮದ್ಯಾಹ್ನ 3:00 ಗಂಟೆಯಿಂದ 4:30 ರವರೆಗೆ ಸಮಾರೋಪ ಸಮಾರಂಭ ಹಾಗೂ “ಸಿರಿಗನ್ನಡ ಸನ್ಮಾನ” ಸಮಾರಂಭ ನೆರವೇರಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ| ಎಂ.ಪಿ ಶ್ರೀನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳ್ತಂಗಡಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯ ಗುರುಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಸಮಾರೋಪ ಭಾಷಣ ನೆರವೇರಿಸಲಿದ್ದಾರೆ.
ಸಹಕಾರ ರತ್ನ ಪುರಸ್ಕೃತರಾದ ನಿತ್ಯಾನಂದ ಮುಂಡೋಡಿ ಹಾಗೂ ಸಾಮಾಜಿಕ ಮುಖಂಡರಾದ ಚಂದ್ರಶೇಖರ ತಳೂರು ಸಾಧಕರನ್ನು ಸನ್ಮಾನಿಸಲಿದ್ದಾರೆ.
ಸಮ್ಮೇಳನಾಧ್ಯಕ್ಷರಾದ ಎ.ಕೆ ಹಿಮಕರ ರವರು ಸಮ್ಮೇಳನಾಧ್ಯಕ್ಷರ ನುಡಿ ಮಾತನಾಡಲಿದ್ದಾರೆ.
“ಸಿರಿಗನ್ನಡ ಸನ್ಮಾನ” ಪುರಸ್ಕೃತರು : ಕ್ರೀಡಾ ಕ್ಷೇತ್ರದಲ್ಲಿ ಎಚ್.ಬಿ ರಾಧಾಕೃಷ್ಣ, ಸಮಾಜ ಸೇವಾ ಕ್ಷೇತ್ರದಲ್ಲಿ ವಸಂತಕುಮಾರ್ ಕಮಿಲ, ಸಾಹಿತ್ಯ ಕ್ಷೇತ್ರದಲ್ಲಿ ಉಮೇಶ್ ಬಿಳಿಮಲೆ ಹಾಗೂ ಶಿವರಾಮ ಕುಂಞೇಟ್ಟಿ, ಕ್ರೀಡೆ ಮತ್ತು ಕಲಾ ಪೋಷಕ ಕ್ಷೇತ್ರದಲ್ಲಿ ವೇಣುಗೋಪಾಲ್ ದೇರಪ್ಪಜ್ಜನಮನೆ, ರಂಗಭೂಮಿ ಕ್ಷೇತ್ರದಲ್ಲಿ ಶಿವರಾಮ ಕಲ್ಮಡ್ಕ, ಭೂತಾರಾಧನೆ ಕ್ಷೇತ್ರದಲ್ಲಿ ಬೊಳಿಯ ಅಜಿಲ ಹಾಗೂ ಚಿದಾನಂದ ಅಡ್ಡನಪಾರೆ, ವಿದ್ಯಾರ್ಥಿ ಕಲಾ ಪ್ರತಿಭೆ ಕ್ಷೇತ್ರದಲ್ಲಿ ರಚನಾ ಚಿದ್ಗಲ್ಲು, ಯುವ ಪ್ರತಿಭಾ ಕ್ಷೇತ್ರದಲ್ಲಿ ಉಲ್ಲಾಸ್ ಕಜ್ಜೋಡಿ ಹಾಗೂ ನಿರಂಜನ್ ಕಡ್ಲಾರು, ಯುವ ಉದ್ಯಮಿ ಕ್ಷೇತ್ರದಲ್ಲಿ ದೇವಿಪ್ರಸಾದ್ ಚಿಕ್ಮುಳಿ ಹಾಗೂ ಸಮಾಜ ಸೇವಾ ತಂಡಗಳಾದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಯುವ ತೇಜಸ್ಸು ಟ್ರಸ್ಟ್(ರಿ.) ಪಂಜ, ಪುಸ್ತಕ ಗೂಡು ಹಾಲೆಮಜಲು, ವಿರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಹಾಗೂ ವಿಪತ್ತು ನಿರ್ವಹಣಾ ತಂಡ ಗುತ್ತಿಗಾರು ಇವರಿಗೆ “ಸಿರಿಗನ್ನಡ ಸನ್ಮಾನ” ನೆರವೇರಲಿದೆ.
ಶ್ರೀಮತಿ ರೂಪವಾಣಿ.ಬಿ ಹಾಗೂ ಬಿಟ್ಟಿ ಬಿ. ನೆಡುನಿಲಂ ಸನ್ಮಾನಿತರ ಪರಿಚಯ ಮಾಡಲಿದ್ದು, ರಾಮಚಂದ್ರ ಪಳಂಗಾಯ ಸ್ವಾಗತಿಸಿ ಲತಾಶ್ರೀ ಸುಪ್ರಿತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿ ವೆಂಕಪ್ಪ ಕೇನಾಜೆ ವಂದನಾರ್ಪಣೆ ಸಲ್ಲಿಸಲಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading