Ad Widget

ವಳಲಂಬೆ : ಕನ್ನಡದ ಕಂಪನ್ನು ಪಸರಿಸಿದ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” – ಕೃತಿ ಬಿಡುಗಡೆ, ವಿಚಾರಗೋಷ್ಠಿ, ಗೀತ ಗಾಯನ, ವಿದ್ಯಾರ್ಥಿ ಕವಿಗೋಷ್ಠಿ ; ಸಮಾರೋಪ ಸಮಾರಂಭದಲ್ಲಿ ಅಮರ ಸುದ್ದಿ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ಸೇರಿದಂತೆ ಹಲವು ಸಾಧಕರಿಗೆ “ಸಿರಿಗನ್ನಡ ಸನ್ಮಾನ”

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇವುಗಳ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ”ವು ಯಶಸ್ವಿಯಾಗಿ ನೆರವೇರಿ ಕನ್ನಡದ ಕಂಪನ್ನು ಪಸರಿಸಿತು. ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು.
ಬೆಳಿಗ್ಗೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ.ಕೆ ಬೆಳ್ಯಪ್ಪ ಗೌಡ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ| ಎಂ.ಪಿ ಶ್ರೀನಾಥ್ ಪರಿಷತ್ತಿನ ಧ್ವಜಾರೋಹಣ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಕನ್ನಡ ಧ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಅನಿಲ್ ಹಾಗೂ ರಮೇಶ್ ಕರಂಗಲ್ಲು ಕಾರ್ಯಕ್ರಮ ನಿರ್ವಹಣೆ ಮಾಡಿದರು.
ನಂತರ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಪುಸ್ತಕ ಪ್ರದರ್ಶನದ ಉದ್ಘಾಟನೆ ನೆರವೇರಿಸಿದರು.
ಸಾಹಿತಿಗಳಾದ ಎ.ಕೆ ಹಿಮಕರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಮ್ಮೇಳನವನ್ನು ಸಾಹಿತಿ, ಸಂಶೋಧಕರು ಹಾಗೂ ಕಿನ್ನಿಗೋಳಿ ಪಾಂಪೈ ಕಾಲೇಜಿನ ಪ್ರಾಂಶುಪಾಲರಾದ ಡಾ| ಪುರುಷೋತ್ತಮ.ಕೆ.ವಿ ಕರಂಗಲ್ಲು ಉದ್ಘಾಟಿಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯರವರು ಪತ್ರಕರ್ತರಾದ ಮಹೇಶ್ ಪುಚ್ಚಪ್ಪಾಡಿ ರವರ “ಸಂತೆಯಲ್ಲಿ ಸಾಗುತ್ತಿರುವ ನಾವು” ಕೃತಿಯನ್ನು ಬಿಡುಗಡೆಗೊಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ| ಎಂ.ಪಿ ಶ್ರೀನಾಥ್ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ| ಚಂದ್ರಶೇಖರ ಪೇರಾಲು ಆಶಯ ನುಡಿ ನುಡಿದರು.
ಮುಖ್ಯ ಅತಿಥಿಗಳಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಾಜಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಹಾಗೂ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಉಪಸ್ಥಿತರಿದ್ದರು.
ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ರವರು ಸ್ವಾಗತಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ ರವರು ಪ್ರಸ್ತಾವನೆ ನೆರವೇರಿಸಿದರು. ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ ಹಾಗೂ ರೈತಗೀತೆ ಹಾಡಿದರು. ಮಾಧವ ಮೂಕಮಲೆ ಸಮ್ಮೇಳನಾಧ್ಯಕ್ಷರ ಪರಿಚಯ ನೆರವೇರಿಸಿ ಶ್ರೀಮತಿ ಚಂದ್ರಮತಿ.ಕೆ ಕಾರ್ಯಕ್ರಮ ನಿರೂಪಿಸಿ ಕೇಶವ.ಹೆಚ್.ಬಿ ಧನ್ಯವಾದ ಸಮರ್ಪಿಸಿದರು.
ಮದ್ಯಾಹ್ನ ವೇಳೆಗೆ ನಡೆದ ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಬಾಳಿಲ ವಿದ್ಯಾಭೋದಿನಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶಿವರಾಮ ಶಾಸ್ತ್ರಿ ಆಚಳ್ಳಿ ವಹಿಸಿದ್ದರು. ಕೃಷಿ ವಿಜ್ಞಾನಿಗಳು ಹಾಗೂ ಅವೆಂಚುರ ಆಗ್ರೋ ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕರಾದ ಡಾ| ಬಿ.ಕೆ ವಿಶುಕುಮಾರ್ “ಕೃಷಿ ಸಮಸ್ಯೆಗಳು ಮತ್ತು ಪರಿಹಾರಗಳು” ವಿಷಯದ ಬಗ್ಗೆ ಹಾಗೂ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಧಿರೇನ್ ಪರಮಲೆ “ಧರ್ಮ ಮತ್ತು ಸಾಹಿತ್ಯ” ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ವಿಜೇಶ್ ಹಿರಿಯಡ್ಕ ಸ್ವಾಗತಿಸಿ ರಮೇಶ್ ಮೆಟ್ಟಿನಡ್ಕ ಧನ್ಯವಾದ ಸಮರ್ಪಿಸಿದರು.
ಮದ್ಯಾಹ್ನ ನಂತರ ನಡೆದ ಗೀತ-ಗಾಯನ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢಶಾಲೆ ಗುತ್ತಿಗಾರು, ಸರ್ಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು, ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಳಲಂಬೆ, ಸರ್ಕಾರಿ ಪ್ರೌಢಶಾಲೆ ಎಲಿಮಲೆ ಹಾಗೂ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಂಜಿತ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಣೆ ಮಾಡಿದರು.
ಅಪರಾಹ್ನ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ 9ನೇ ತರಗತಿಯ ಧೃತಿ.ಎಂ.ಜೆ ಮರಕತ ಇವರ ಅಧ್ಯಕ್ಷತೆಯಲ್ಲಿ ನಡೆದ ವಿದ್ಯಾರ್ಥಿ ಕವಿಗೋಷ್ಠಿಯಲ್ಲಿ ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ 8ನೇ ತರಗತಿಯ ನಿತಾಶ್ರೀ.ಕೆ.ಆರ್, 10ನೇ ತರಗತಿಯ ಸುಜನ್.ಎ.ಜೆ, ಎಣ್ಮೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಅಮಿನಾ ಮರ್ಜಾನ, ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ 10ನೇ ತರಗತಿಯ ಧನ್ವಿತಾ, ಎಣ್ಮೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಹಂಸಿನಿ, ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಮೇಘ.ಹೆಚ್.ಕೆ, 10ನೇ ತರಗತಿಯ ಸುಶ್ಮಿತಾ, ಎಣ್ಮೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ಯಜ್ಞ ಹಾಗೂ ಪಂಜ ಸರ್ಕಾರಿ ಪದವಿಪೂರ್ವ ಕಾಲೇಜಿನ 8ನೇ ತರಗತಿಯ ಜಾಹ್ನವಿ.ಎಂ ಭಾಗವಹಿಸಿದ್ದರು. ಕುಶಾಲಪ್ಪ ತುಂಬತ್ತಾಜೆ ಸ್ವಾಗತಿಸಿ ತೇಜಪ್ಪ ಸಂಪ್ಯಾಡಿ ಧನ್ಯವಾದ ಸಮರ್ಪಣೆ ಮಾಡಿದರು.
ನಂತರ ನಡೆದ ಸಮಾರೋಪ ಸಮಾರಂಭ ಹಾಗೂ “ಸಿರಿಗನ್ನಡ ಸನ್ಮಾನ” ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ| ಎಂ.ಪಿ ಶ್ರೀನಾಥ್ ವಹಿಸಿದ್ದರು. ಬೆಳ್ತಂಗಡಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯ ಗುರುಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಸಮಾರೋಪ ಭಾಷಣ ನೆರವೇರಿಸಿದರು. ಸಮ್ಮೇಳನಾಧ್ಯಕ್ಷರಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷರ ನುಡಿಯನ್ನು ನುಡಿದರು.
ನಂತರ ಕ್ರೀಡಾ ಕ್ಷೇತ್ರದಲ್ಲಿ ಎಚ್.ಬಿ ರಾಧಾಕೃಷ್ಣ, ಸಮಾಜಸೇವಾ ಕ್ಷೇತ್ರದಲ್ಲಿ ವಸಂತಕುಮಾರ್ ಕಮಿಲ, ಸಾಹಿತ್ಯ ಕ್ಷೇತ್ರದಲ್ಲಿ ಉಮೇಶ್ ಬಿಳಿಮಲೆ ಹಾಗೂ ಶಿವರಾಮ ಕುಂಞೇಟ್ಟಿ, ಕ್ರೀಡೆ ಹಾಗೂ ಕಲಾ ಪೋಷಕ ಕ್ಷೇತ್ರದಲ್ಲಿ ವೇಣುಗೋಪಾಲ್ ದೇರಪ್ಪಜ್ಜನಮನೆ, ರಂಗಭೂಮಿ ಕ್ಷೇತ್ರದಲ್ಲಿ ಶಿವರಾಮ ಕಲ್ಮಡ್ಕ, ಭೂತಾರಾಧನೆ ಕ್ಷೇತ್ರದಲ್ಲಿ ಬೊಳಿಯ ಅಜಿಲ ಹಾಗೂ ಚಿದಾನಂದ ಅಡ್ಡನಪಾರೆ, ವಿದ್ಯಾರ್ಥಿ ಕಲಾ ಪ್ರತಿಭೆ ಕ್ಷೇತ್ರದಲ್ಲಿ ರಚನಾ ಚಿದ್ಗಲ್ಲು, ಯುವ ಪ್ರತಿಭೆ ಕ್ಷೇತ್ರದಲ್ಲಿ ಉಲ್ಲಾಸ್ ಕಜ್ಜೋಡಿ ಹಾಗೂ ನಿರಂಜನ್ ಕಡ್ಲಾರು, ಯುವ ಉದ್ಯಮಿ ಕ್ಷೇತ್ರದಲ್ಲಿ ದೇವಿಪ್ರಸಾದ್ ಚಿಕ್ಮುಳಿ ಹಾಗೂ ಸಮಾಜ ಸೇವಾ ತಂಡಗಳಾದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಯುವ ತೇಜಸ್ಸು ಟ್ರಸ್ಟ್(ರಿ.) ಪಂಜ, ಪುಸ್ತಕ ಗೂಡು ಹಾಲೆಮಜಲು, ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಹಾಗೂ ವಿಪತ್ತು ನಿರ್ವಹಣಾ ತಂಡ ಗುತ್ತಿಗಾರು ಇವರಿಗೆ “ಸಿರಿಗನ್ನಡ ಸನ್ಮಾನ” ನೆರವೇರಿತು. ಶ್ರೀಮತಿ ರೂಪವಾಣಿ.ಬಿ ಹಾಗೂ ಬಿಟ್ಟಿ.ಬಿ ನೆಡುನಿಲಂ ಸನ್ಮಾನಿತರ ಪರಿಚಯ ಮಾಡಿದರು. ರಾಮಚಂದ್ರ ಪಳಂಗಾಯ ಸ್ವಾಗತಿಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿ ವೆಂಕಪ್ಪ ಕೇನಾಜೆ ವಂದನಾರ್ಪಣೆ ಮಾಡಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading