Ad Widget

ಚೊಕ್ಕಾಡಿ : ಮಕ್ಕಳ ದಿನಾಚರಣೆ

ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಹಾಗೂ ಸ್ತ್ರೀ ಶಕ್ತಿ ಸಂಘ ಚೊಕ್ಕಾಡಿ ಇದರ ವತಿಯಿಂದ ಚೊಕ್ಕಾಡಿ ಅಂಗನವಾಡಿ ಪುಟಾಣಿ ಮಕ್ಕಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ನಡೆಸಲಾಯಿತು. ಮಕ್ಕಳಿಗೆ  ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ನೀಡಲಾಯಿತು. ಜೊತೆಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ ಗೀತಾ ಕೊರತ್ಯಡ್ಕ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading