Ad Widget

ಬಾಳುಗೋಡು : ಯುವ ಪತ್ರಕರ್ತ ಉಲ್ಲಾಸ್ ಕಜ್ಜೋಡಿ ಅವರನ್ನು ಸನ್ಮಾನಿಸಿದ ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಯುವ ಪತ್ರಕರ್ತ, ಬರಹಗಾರ ಹಾಗೂ ಅಮರ ಸುದ್ದಿ ವಾರಪತ್ರಿಕೆಯ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ಅವರನ್ನು ಸಂಸದರು ಶಾಲು ಹೊದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಪ್ರಸನ್ನ ದರ್ಬೆ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕೃಷ್ಣಯ್ಯ ಮೂಲೆತೋಟ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಕುಮಾರ್ ಶಿರಾಡಿ, ಸುಳ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಬಾಳುಗೋಡು ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಕಟ್ಟೆಮನೆ, ಬಾಳುಗೋಡು ಬಿಜೆಪಿ ಬೂತ್ ಸಮಿತಿ ಸದಸ್ಯರಾದ ಚಂದ್ರಹಾಸ ಶಿವಾಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading