Ad Widget

ಬಾಳುಗೋಡು : “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ; ಸಾರ್ವಜನಿಕರೊಂದಿಗೆ ಸಂವಾದ-ಅಹವಾಲು ಸ್ವೀಕಾರ ; ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಕೆ ; ಇಬ್ಬರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಮುಚ್ಚಾರ ಬೆಟ್ಟುಮಕ್ಕಿ ದಿ| ತಮ್ಮಯ್ಯ ಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ವಿನಯ್ ಮುಳುಗಾಡು, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕೃಷ್ಣಯ್ಯ ಮೂಲೆತೋಟ, ಸುಳ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಕುಮಾರ್ ಶಿರಾಡಿ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಬಿಜೆಪಿ ಶಕ್ತಿಕೇಂದ್ರ ಬಾಳುಗೋಡು ಸಮಿತಿಯ ಅಧ್ಯಕ್ಷರಾದ ಜಯಂತ್ ಬಾಳುಗೋಡು, ಸುಳ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ, ಸಹಕಾರ ಭಾರತಿ ಸುಳ್ಯ ತಾಲೂಕು ಒಕ್ಕೂಟದ ಅಧ್ಯಕ್ಷರು ಹಾಗೂ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕಟ್ಟೆಮನೆ, ಬಾಳುಗೋಡು ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಕಟ್ಟೆಮನೆ, ಬಿಜೆಪಿ ಮಂಡಲ ಸಮಿತಿಯ ಸದಸ್ಯರಾದ ಚಂದ್ರಹಾಸ ಶಿವಾಲ ಉಪಸ್ಥಿತರಿದ್ದರು.
ಈ ಸಭೆಯಲ್ಲಿ ಐನೆಕಿದು-ಕೋಟೆ-ಬಾಳುಗೋಡು-ಉಪ್ಪುಕಳ ಸಂಪರ್ಕ ರಸ್ತೆ ಸಮಸ್ಯೆ, ಕೊಪ್ಪತ್ತಡ್ಕ ಸೇತುವೆ ಸಮಸ್ಯೆ, ಟವರ್ ನೆಟ್ ವರ್ಕ್ ಸಮಸ್ಯೆ, ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಜಂಟಿ ಸರ್ವೇ ಬಗ್ಗೆ, ಕಾಲೋನಿ ಸಮಸ್ಯೆಗಳ ಬಗ್ಗೆ ಹಾಗೂ ಯುವಕ ಮಂಡಲ ಕಟ್ಟಡ, ಅಂಗನವಾಡಿ ಕಟ್ಟಡದ ಅಭಿವೃದ್ಧಿಗಾಗಿ ಸಾರ್ವಜನಿಕರು ಮನವಿಗಳನ್ನು ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಬಾಳುಗೋಡು ಗ್ರಾಮದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕರಾದ ಗಿರೀಶ್ ಕಟ್ಟೆಮನೆ ಹಾಗೂ ಬಾಳುಗೋಡು ಹಾಲುತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಹಕಾರ ಭಾರತಿ ಉಪಾಧ್ಯಕ್ಷರಾದ ಶ್ರೀಮತಿ ಶರ್ಮಿಳಾ ಗಿರೀಶ್ ಕಟ್ಟೆಮನೆ ಅವರು ಸಂಸದರು ಹಾಗೂ ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕುಸುಮಾ ಮಿತ್ತಡ್ಕ ಪ್ರಾರ್ಥಿಸಿದರು.
ಚಂದ್ರಹಾಸ ಶಿವಾಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ರಾಧಾಕೃಷ್ಣ ಬಾಳುಗೋಡು ವಂದಿಸಿದರು.
ಅವಿನ್ ಕಿರಿಭಾಗ ಹಾಗೂ ಲೋಹಿತ್ ಕಿರಿಭಾಗ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading