Ad Widget

ವಳಲಂಬೆ : ನ.24 ರಂದು ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ವಳಲಂಬೆ, ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಯೋಗದೊಂದಿಗೆ ನ.24 ರಂದು ಪೂರ್ವಾಹ್ನ 9:30ಕ್ಕೆ ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ “ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಬ್ರಹ್ಮಣ್ಯ ಠಾಣಾ ಸಬ್ ಇನ್ಸ್ಪೆಕ್ಟರ್ ಕಾರ್ತಿಕ್.ಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅತಿಥಿಗಳಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ ಬಾಲವಿಕಾಸ ಸಮಿತಿಯ ಸದಸ್ಯರಾದ ವೆಂಕಟ್ ವಳಲಂಬೆ, ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಶೈಲಜಾ.ಬಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅಜಿತ್.ಬಿ.ಕೆ, ಗುತ್ತಿಗಾರು ಪಿ.ಯಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ವಳಲಂಬೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವೀಶ್ ಮೊಟ್ಟೆ, ವಳಲಂಬೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಪುರ್ಲುಮುಕ್ಕಿ, ವಳಲಂಬೆ ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯಂತ್ ಕಾಜಿಮಡ್ಕ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿ ಸದಸ್ಯರಾದ ಸನತ್ ಮುಳುಗಾಡು, ಗುತ್ತಿಗಾರು ವಲಯ ಮೇಲ್ವಿಚಾರಕರಾದ ಶ್ರೀಮತಿ ದೀಪಿಕಾ, ನಿವೃತ್ತ ಪೋಲೀಸ್ ಉಪನಿರೀಕ್ಷಕರಾದ ಸುಬ್ಬಣ್ಣ ಗೌಡ ಮಣಿಯಾನ, ವಳಲಂಬೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕು| ತೃಪ್ತಿ, ವಳಲಂಬೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸ್ವಾತಿ.ಕೆ, ವಳಲಂಬೆ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಚಂದ್ರಾವತಿ.ಹೆಚ್ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ವೆಂಕಟ್ ವಳಲಂಬೆ, ಸನತ್ ಮುಳುಗಾಡು ಹಾಗೂ ಸುಬ್ಬಣ್ಣ ಗೌಡ ಮಣಿಯಾನ ಇವರಿಗೆ ಸನ್ಮಾನ ಸಮಾರಂಭ ನೆರವೇರಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading