Ad Widget

ಕುಕ್ಕೆ ಸುಬ್ರಹ್ಮಣ್ಯ : ಚಂಪಾಷಷ್ಠಿ ಜಾತ್ರೆಯಲ್ಲಿ ಚೌತಿಯಂದು ಪಲ್ಲಪೂಜೆ

ಸುಬ್ರಹ್ಮಣ್ಯ ನ.24 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕಾರ್ತಿಕ ಶುದ್ಧ ಚೌತಿಯ ದಿನವಾದ ಸೋಮವಾರ ಶ್ರೀ ದೇವಳದಲ್ಲಿ ಪಲ್ಲಪೂಜೆ ನೆರವೇರಿತು.
ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ  ಎಡಪಡಿ ತಾಯರು ಒಳಾಂಗಣದಲ್ಲಿ ಪಲ್ಲಪೂಜೆ ನೆರವೇರಿಸಿದರು. ಬಳಿಕ ಅಕ್ಷಯಪಾತ್ರೆಗೆ ಪೂಜೆ ಸಲ್ಲಿಸಿದರು. ಕುಕ್ಕೆಯಲ್ಲಿ ನಿರಂತರ ಅನ್ನದಾನ ನಡೆಯುವುದು ಪ್ರಧಾನವಾಗಿದ್ದು, ಜಾತ್ರಾ ಸಮಯ ವಿಶೇಷ ಭೋಜನ ಪ್ರಸಾದ ವಿತರಣೆಯ ಸಂಕೇತವಾಗಿ ದೇವಳದಲ್ಲಿ ಪಲ್ಲಪೂಜೆ ನಡೆದಿರುತ್ತದೆ.
ಸೋಮವಾರ ಮಧ್ಯಾಹ್ನ ಪುರೋಹಿತ ಪ್ರಸನ್ನ ಹೊಳ್ಳ ಅವರು ಅಂಗಡಿಗುಡ್ಡೆ ಯಲ್ಲಿ ನಿರ್ಮಿಸಲಾದ ವಿಶಾಲವಾದ ಭೋಜನ ಶಾಲೆಯಲ್ಲಿ ಅನ್ನಬ್ರಹ್ಮನಿಗೆ ಪೂಜೆ ಸಲ್ಲಿಸಿದರು. ಇಲ್ಲಿ ಮೂರು ದಿನಗಳ ಕಾಲ ಭಕ್ತರಿಗೆ ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಭೋಜನ ಪ್ರಸಾದ ವಿತರಣೆ ಆಗಲಿದೆ.
ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು, ಕಾರ್ಯನಿರ್ವಹಣಾಧಿಕಾರಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯರು, ಮಲೆಕುಡಿಯ ಜನಾಂಗದ ಮುಖಂಡರು, ಹಾಗೂ ಸ್ಥಳೀಯ ಮುಖಂಡರು, ಭಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading