Ad Widget

ಅಮರ ಸಂಘಟನಾ ಸಮಿತಿ ವತಿಯಿಂದ ಹಾಸನಡ್ಕ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಳ್ಯ : ನವೆಂಬರ್ 26 ರಂದು ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ವತಿಯಿಂದ ಹಾಸನಡ್ಕ ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುದೀರ್ ದೇವ, ಉಪಾಧ್ಯಕ್ಷರು ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರು
ತಿಮ್ಮಪ್ಪ ಗೌಡ ಕೊಂಡೆಬಾಯಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಅಮರಮಡ್ನೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಜಯಪ್ರಕಾಶ್ ದೊಡ್ಡಿಹಿತ್ಲು, ಸದಸ್ಯರು ಗ್ರಾಮ ಪಂಚಾಯತ್ ಅಮರಮುಡ್ನೂರು ,ಸವಿತ ಉರುಂಬಿ, ಅಧ್ಯಕ್ಷರು ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ಹಾಸನಡ್ಕ, ನಳಿನಿ ಕೆ, ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಕೇಂದ್ರ ಹಾಸನಡ್ಕ ಇವರು ವಹಿಸಿ ಶುಭ ಹಾರೈಸಿದರು. ಹರ್ಷೀತ್ ದಾತಡ್ಕ ಸ್ವಾಗತಿಸಿ, ಕಿರ್ತನ್ ಪಾರೆ ವಂದಿಸಿದರು. ಪ್ರದೀಪ್ ಬೊಳ್ಳೂರು ಕಾರ್ಯಕ್ರಮ ನಿರೂಪಿಸಿದರು. ಅಮರ ಸಂಘಟನಾ ಸಮಿತಿಯ ಸದಸ್ಯರಾದ ಶಿವಪ್ರಸಾದ್ ದೊಡ್ಡಿಹಿತ್ಲು, ಪ್ರಸಾದ್ ಬೊಳ್ಳೂರು,ಅನಿತಾ ಮಂಜುನಾಥ್ ಕುಕ್ಕುಜಡ್ಕ, ಮನೀಶ್ ಕಡಪಳ, ಮಿಥುನ್ ಕೆರೆಗದ್ದೆ, ಇವರುಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading