Ad Widget

ಹರಿಹರ ಪಳ್ಳತ್ತಡ್ಕ : ಕಳೆದ ಕೆಲವು ತಿಂಗಳುಗಳಿಂದ ಸಾರ್ವಜನಿಕ ಶೌಚಾಲಯದಲ್ಲಿ ನೀರಿನ ಸಮಸ್ಯೆ – ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ; ಸ್ಥಳೀಯರಿಂದ ತಾತ್ಕಾಲಿಕ ನೀರಿನ ವ್ಯವಸ್ಥೆ ; ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಆಗ್ರಹ – ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ ಗ್ರಾಮ ಪಂಚಾಯತ್

(ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಮುಖ್ಯ ಪೇಟೆಯಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನೀರಿನ ಸಮಸ್ಯೆ ಇದ್ದು, ಇದರಿಂದಾಗಿ ಪ್ರತಿನಿತ್ಯ ಪೇಟೆಗೆ ಬರುವ ಜನರಿಗೆ ಹಾಗೂ ಸ್ಥಳೀಯ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು, “ಸುಸಜ್ಜಿತ ಸಾರ್ವಜನಿಕ ಶೌಚಾಲಯ ವ್ಯವಸ್ಥೆ ಇದ್ದರೂ ಕೂಡ ನೀರಿನ ಸಮಸ್ಯೆಯಿಂದಾಗಿ ನಿರಂತರ ತೊಂದರೆ ಉಂಟಾಗುತ್ತಿದ್ದು, ಶೌಚಾಲಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿಲ್ಲ, ಶೌಚಾಲಯವಿದ್ದೂ ಉಪಯೋಗಕ್ಕಿಲ್ಲದಂತಾಗಿದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನೀರಿನ ಸಮಸ್ಯೆಯಿಂದಾಗಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಗಮನಿಸಿ ಸ್ಥಳೀಯ ವಾಹನ ಚಾಲಕರು ಶೌಚಾಲಯಕ್ಕೆ ತಾತ್ಕಾಲಿಕ ನೀರಿನ ವ್ಯವಸ್ಥೆಯನ್ನು ಮಾಡಿದ್ದು, ಗ್ರಾಮ ಪಂಚಾಯತ್ ವತಿಯಿಂದ ಶಾಶ್ವತ ನೀರಿನ ವ್ಯವಸ್ಥೆ ಆಗಬೇಕಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಸಂಪರ್ಕಿಸಿದಾಗ ಶೌಚಾಲಯಕ್ಕೆ ಶಾಶ್ವತವಾಗಿ ನೀರನ್ನು ಒದಗಿಸುವ ಕಾರ್ಯ ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ. ಆದ್ದರಿಂದ ಆದಷ್ಟು ಬೇಗ ಈ ಕಾರ್ಯವನ್ನು ಪೂರ್ಣಗೊಳಿಸಿ ಸಾರ್ವಜನಿಕ ಶೌಚಾಲಯದಲ್ಲಿರುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸುವುದರೊಂದಿಗೆ ಇನ್ನು ಮುಂದೆ ಈ ರೀತಿಯ ಸಮಸ್ಯೆ ಮರುಕಳಿಸದಂತೆ ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಜನಪ್ರತಿನಿಧಿಗಳು ಗಮನಹರಿಸಬೇಕಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading