Ad Widget

ನಡುಗಲ್ಲು : ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ ಉದ್ಘಾಟನೆ

ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಇವರ ನೇತೃತ್ವದಲ್ಲಿ ನಡುಗಲ್ಲು ಪ್ರಾಥಮಿಕ ಶಾಲೆಯಲ್ಲಿ “ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ” ನಡೆಯಲಿದ್ದು, ಇದರ ಉದ್ಘಾಟನೆಯನ್ನು ಶ್ರೀ ಮಹಾಮೃತ್ಯುಂಜಯೇಶ್ವರ ಪಾರ್ವತಿ ಕ್ಷೇತ್ರ ನಡುಗಲ್ಲು ಇದರ ಸೇವಾ ಟ್ರಸ್ಟ್ ಅಧ್ಯಕ್ಷರಾದ ರಾಮಚಂದ್ರ ಭಟ್ ನಡುಗಲ್ಲು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಗುತ್ತಿಗಾರು ವಲಯದ ಅಧ್ಯಕ್ಷರಾದ ಶ್ರೀ ಪೂರ್ಣಚಂದ್ರ ಪೈಕ, ಕಡಬ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀ ಸುಂದರ ಬಿಳಿನೆಲೆ, ಭಜನಾ ಮಂಡಳಿ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಮಾವಿನಕಟ್ಟೆ, ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾದ ಶ್ರೀ ರವೀಂದ್ರ ಕೊರಂಬಟ, ಶಾಲಾ SDMC ಅಧ್ಯಕ್ಷರಾದ ಶಿವರಾಮ ಉತ್ರಂಬೆ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ಧನ ಗೌಡ ಸೂಡ್ಲು, ಚಂದ್ರಶೇಖರ ಬಾಳುಗೋಡು, ಭಜನಾ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್ ಚಾರ್ಮಾತ, ಕಾರ್ಯದರ್ಶಿ ವಿಶ್ವನಾಥ್ ಕುತ್ಯಾಳ, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ, ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಕಾರ್ಯದರ್ಶಿ ಶ್ರೀಮತಿ ಶ್ರುತಿ  ಮರಕತ ಹಾಗೂ ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.
ಭಜನಾ ತರಬೇತಿಯನ್ನು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯ ಸದಸ್ಯರು, ಪರಿಷತ್ ಅಧ್ಯಕ್ಷರಾದ ಸುಂದರ ಬಿಳಿನೆಲೆರವರ ನೇತೃತ್ವದಲ್ಲಿ ನಡೆಸಿಕೊಡಲಿದ್ದಾರೆ.
ನಡುಗಲ್ಲು ಪರಿಸರದ 50ಕ್ಕೂ ಹೆಚ್ಚು ಮಕ್ಕಳು ತರಬೇತಿಯಲ್ಲಿ ಭಾಗವಹಿಸಿದರು.
ನಾಲ್ಕೂರು ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading