Ad Widget

ಪಂಜ : ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ – ಇಂದಿನಿಂದ ಆರಂಭ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ ಡಿ.03, 04 ಮತ್ತು 05 ರಂದು ನಡೆಯಲಿದೆ.
ಇಂದು ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಮಹಾಗಣಪತಿ ಹೋಮ ನಡೆಯಿತು. ನಂತರ ಮೃತ್ಯುಂಜಯ ಹೋಮ, ಆಶ್ಲೇಷ ಬಲಿ, ಮಧ್ಯಾಹ್ನ ಗಂಟೆ 12 ರಿಂದ ಹೋಮದ ಪೂರ್ಣಾಹುತಿ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ. ಸಂಜೆ ಗಂಟೆ 5:30ರಿಂದ ದುರ್ಗಾಪೂಜೆ, ಸುದರ್ಶನ ಹೋಮ, ಅಘೋರ ಹೋಮ, ವನದುರ್ಗಾ ಹೋಮ. ರಾತ್ರಿ ಗಂಟೆ 8:30ರಿಂದ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.
ಈ ಸಂದರ್ಭದಲ್ಲಿ  ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಕಾಚುಕುಜುಂಬ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪರಮೇಶ್ವರ ಬಿಳಿಮಲೆ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ಪಲ್ಲತಡ್ಕ, ಸತ್ಯ ನಾರಾಯಣ ಭಟ್, ಧರ್ಮಣ್ಣ ನಾಯ್ಕ ಗರಡಿ, ಮಾಯಿಲ್ಲಪ್ಪ ಗೌಡ ಎಣ್ಮೂರು,ಧರ್ಮಪಾಲ ಗೌಡ ಮರಕ್ಕಡ, ಪವಿತ್ರ  ಮಲ್ಲೆಟ್ಟಿ, ಮಾಲಿನಿ ಕುದ್ವ, ಜೀರ್ಣೋದ್ಧಾರ  ಸಮಿತಿ ಕಾರ್ಯದರ್ಶಿ ಆನಂದ ಗೌಡ ಜಲಕದ ಹೊಳೆ ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading