Ad Widget

ಚೊಕ್ಕಾಡಿ : ಪಂಚಸಪ್ತತಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ವಚ್ಚತೆಯ ಬಗ್ಗೆ ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ  ಇದರ ವತಿಯಿಂದ ಪಂಚಸಪ್ತತಿ 2025ರ ಅಂಗವಾಗಿ “ನಮ್ಮ ಊರು ಸ್ವಚ್ಛ ಊರು” ಎಂಬ ಧ್ಯೇಯವಾಕ್ಯದೊಂದಿಗೆ  ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ, ಕುಕ್ಕುಜಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಚಿತ್ರಕಲೆ  ಸ್ಪರ್ಧೆ ಹಾಗೂ ಸ್ವಚ್ಛತೆಯ  ಬಗ್ಗೆ ರಸಪ್ರಶ್ನೆಗಳನ್ನು  ಏರ್ಪಡಿಸಲಾಯಿತು.
ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ ಪರಿಸರ ಜಾಗೃತಿಯನ್ನು ಬೆಳೆಸುವುದು ಮುಖ್ಯ ಉದ್ದೇಶವಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ  ಶ್ರೀಮತಿ ಭವ್ಯ ನೆರವೇರಿಸಿದರು. ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ ಗೀತಾ ಕೊರತ್ಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಂತರ ಎಲ್.ಕೆ.ಜಿಯಿಂದ 7ನೆಯ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಚಿತ್ರಕಲೆ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಮತ್ತು ಯುವತಿ ಮಂಡಲದ ಸದಸ್ಯೆಯರು  ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading