Ad Widget

ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷರು ಕುಕ್ಕೆ ಭೇಟಿ

ಸುಬ್ರಹ್ಮಣ್ಯ ಡಿಸೆಂಬರ್ 4 : ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತ ಒಕ್ಕೂಟದ ಅಧ್ಯಕ್ಷರು ಹಾಗೂ ರಾಜ್ಯ ಕನ್ನಡಪ್ರಭ ಪತ್ರಿಕೆಯ ಸಂಪಾದಕರು ಆದ ಬಿ.ವಿ. ಮಲ್ಲಿಕಾರ್ಜುನಯ್ಯ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರೊಂದಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಹಾಗೂ ರಾಜ್ಯ ನಿರ್ದೇಶಕರಾದ ಕೆ ಆರ್ ದೇವರಾಜ್ ಅವರು ಜೊತೆಗಿದ್ದರು.
ಕುಕ್ಕೆಗೆ ಗುರುವಾರ ಭೇಟಿ ನೀಡಿದ ಅವರನ್ನು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ, ಉಪಾಧ್ಯಕ್ಷ ಲೊಕೇಶ್ ಬಿ.ಎನ್  ಹಾಗೂ ನಿರ್ದೇಶಕರಾದ ಶಿವ ಭಟ್ ಬರಮಾಡಿಕೊಂಡರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರನ್ನು ದೇವಳದ ಪರವಾಗಿ ಗೌರವಿಸಲಾಯಿತು. ಶಿಷ್ಟಾಚಾರ ವಿಭಾಗದ ನಿಮಿರಾಜ್ ಜೊತೆಗಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading