Ad Widget

ಸುಳ್ಯದಲ್ಲಿ ಡಿ.06 ರಂದು ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಉದ್ಘಾಟನೆ

ಸಮೃದ್ಧಿ ಗ್ರೂಪ್ ಆಪ್ ಕಂಪೆನಿಯ ಅಂಗಸಂಸ್ಥೆಯಾಗಿರುವ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಳೆದ 14 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯದಿದ್ದು ಸುಳ್ಯದಲ್ಲಿ 34ನೇ ಶಾಖೆ ಡಿ.06 ರಂದು ಶುಭಾರಂಭಗೊಳ್ಳಲಿದೆ. ಸಮೃದ್ಧಿ ಗ್ರೂಪ್ಸ್ ನ ನೇತೃತ್ವದಲ್ಲಿ ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಸಮೃದ್ಧಿ ಗೋಲ್ಡ್ ಪ್ಯಾಲೇಸ್, ಸಮೃದ್ಧಿ ಫಾರ್ಮ್ಸ್ ಅಂಡ್ ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಹಲವಾರು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ.

. . . . . . . . .

ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ಸುಳ್ಯದ ಬಸ್ ನಿಲ್ದಾಣದ ಬಳಿ ಇರುವ ಸುಳ್ಯ ಸೆಂಟರ್ ಬಿಲ್ಡಿಂಗ್ ನಲ್ಲಿ ಪ್ರಾರಂಭವಾಗಲಿದ್ದು, ಇದರ ಉದ್ಘಾಟನಾ ಸಮಾರಂಭವು ಡಿ.06 ಶನಿವಾರದಂದು ಬೆಳಿಗ್ಗೆ 8.30 ಗಂಟೆಗೆ ನೆರವೇರಲಿದೆ.
ಡಿ.05 ರಂದು ಸಂಜೆ 6:30ಕ್ಕೆ ವಾಸ್ತು ಹೋಮ ನಡೆಯಲಿದ್ದು, ಡಿ.06 ರಂದು ಬೆಳಿಗ್ಗೆ 6:00 ಗಂಟೆಯಿಂದ ಗಣಪತಿ ಪೂಜೆ ಹಾಗೂ ಲಕ್ಷ್ಮಿ ಪೂಜೆ ನಡೆಯಲಿದೆ.
ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಮೃದ್ಧಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಸಮೃದ್ಧಿ ವಿ. ಮಂಜುನಾಥ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading