Ad Widget

ಸುಬ್ರಹ್ಮಣ್ಯದಲ್ಲಿ ಮಹಿಳಾ ಗ್ರಾಮ ಸಭೆ

ಸುಬ್ರಹ್ಮಣ್ಯ ಡಿಸೆಂಬರ್ 4 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ 2025-26ನೇ ಸಾಲಿನ ಮಹಿಳಾ ಗ್ರಾಮ ಸಭೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಅವರ  ಅಧ್ಯಕ್ಷತೆಯಲ್ಲಿ ಬುಧವಾರ ನಡೆಸಲಾಯಿತು. ಈ ಮಹಿಳಾ ಗ್ರಾಮ ಸಭೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್ ಗೆ ಒಳಪಟ್ಟ ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು ಗ್ರಾಮಗಳ ಎಲ್ಲಾ ಮಹಿಳೆಯರು, ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು, ಎಂ.ಬಿ.ಕೆ, ಎಲ್.ಸಿ.ಆರ್.ಪಿ ಒಕ್ಕೂಟದ ಎಲ್ಲಾ ಸಖಿಗಳು ಹಾಗೂ ಸದಸ್ಯರುಗಳು, ಎಲ್ಲಾ ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು, ವಾಣಿ ವನಿತಾ ಸಮಾಜ ಹಾಗೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ವರಮಹಾಲಕ್ಷ್ಮಿ ಸಮಿತಿಗಳು ಹಾಗೂ ಮಹಿಳಾ ಜನಪ್ರತಿನಿಧಿಗಳು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವುದರೊಂದಿಗೆ ಅಗತ್ಯ ಮೂಲಭೂತ ಸೌಕರ್ಯದ ಬಗ್ಗೆ ಜನಪ್ರತಿನಿಧಿಗಳ ಗಮನಸೆಳೆದರು.
ಈ ಸಂದರ್ಭದಲ್ಲಿ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಬಲೀಕರಣ, ಮಕ್ಕಳ ಪೋಷಣೆ ಮತ್ತು ರಕ್ಷಣೆ ಮಹಿಳಾ ಆರೋಗ್ಯ ಸುಧಾರಣೆ, ನೈರ್ಮಲ್ಯ ಹಾಗೂ ಮಹಿಳಾಪರ ಕಾನೂನು ಮತ್ತು ಕೌಟುಂಬಿಕ ದೌರ್ಜನ್ಯ, ತಡೆ ಕಾಯಿದೆಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಮಹಿಳೆಯರ ಸುಖಿ ಜೀವನ ಹಾಗೂ ಪ್ರಾಮುಖ್ಯತೆ ಬಗ್ಗೆ ಕೆ.ಎಸ್.ಎಸ್ ಕಾಲೇಜಿನ ಉಪನ್ಯಾಸಕಿ ಆರತಿಯವರು ಮಾಹಿತಿ ನೀಡಿದರು. ಲಿಂಗತ್ವ ದೌರ್ಜನ್ಯ ಕುರಿತು ರಾಷ್ಟ್ರೀಯ ಅಭಯಾನದ ತಾಲೂಕು ಪಂಚಾಯತ್ ಸಂಪನ್ಮೂಲ ವ್ಯಕ್ತಿ ಧನ್ಯಶ್ರೀ ಮಾಹಿತಿ ನೀಡಿದರು. ಸಾಂಕ್ರಾಮಿಕ ರೋಗದ ರೋಗಗಳ ಬಗ್ಗೆ ಸಮುದಾಯ ಆರೋಗ್ಯ ಅಧಿಕಾರಿ ನವ್ಯಶ್ರೀ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ.ಡಿ ಧನ್ಯವಾದ ಸಮರ್ಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading