Ad Widget

ಮುರುಳ್ಯ : ಬೀದಿ ನಾಯಿಗಳ ಹಾವಳಿಯ ಬಗ್ಗೆ ಕ್ರಮ ಹಾಗೂ  ಬೀದಿ ದೀಪ ಅಳವಡಿಸುವಂತೆ ಎಸ್‌ಡಿಪಿಐ ವತಿಯಿಂದ  ಮನವಿ

ಮುರುಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಹಾದಿ, ಕುಕ್ಕಟ್ಟೆ, ಅಲೆಕ್ಕಾಡಿ ನಿಂತಿಕಲ್ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಹಾಗೂ ಸಮಹಾದಿ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮುರುಳ್ಯ ಬ್ರಾಂಚ್ ಸಮಿತಿ ವತಿಯಿಂದ ಮುರುಳ್ಯ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಗಳಲ್ಲಿ ಓಡಾಡಲು ಜನರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ವೃದ್ಧರ ಮೇಲೆ ನಾಯಿಗಳು ದಾಳಿ ಮಾಡುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳ ಹಾವಳಿಯಿಂದ ಶಾಲಾ ವಿದ್ಯಾರ್ಥಿಗಳು, ಮದ್ರಸಾ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ  ಸಾರ್ವಜನಿಕರಿಗೆ ರಸ್ತೆಯಲ್ಲಿ ನಡೆದಾಡಲು ಹೆದರುವಂತಾಗಿದೆ. ರಸ್ತೆಗಳಲ್ಲಿ ಬೈಕ್‌ನಲ್ಲಿ ಹೋಗುವ ಸವಾರರನ್ನು ನಾಯಿಗಳು ಬೆನ್ನಟ್ಟುತ್ತಿದ್ದು, ಹಲವರು ಬೈಕ್‌ನಿಂದ ಉರುಳಿಬಿದ್ದ ಘಟನೆಗಳೂ ನಡೆದಿವೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮುರುಳ್ಯ ಬ್ರಾಂಚ್ ಅಧ್ಯಕ್ಷ ಮಹಮ್ಮದ್ ಬಶೀರ್, ಸದಸ್ಯರಾದ ಸಮೀರ್ ಕುಕ್ಕಟ್ಟೆ ಹಾಗೂ ನೌಫಲ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading