Ad Widget

ಮಂಡೆಕೋಲು : ದಾಸ ಸಂಕೀರ್ತನೆ ಹಾಗೂ
ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಜ್ಜಾವರ ವಲಯ ಹಾಗೂ ತತ್ವಮಸಿ ಗುಂಪು ಮಂಡೆಕೋಲು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ,ಶಶ್ರೀ ಶಬರಿಗಿರಿ ಸೇವಾ ಪ್ರತಿಷ್ಠಾನ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಮಂಡೆಕೋಲು ಇವುಗಳ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನಾ ಕುಣಿತ ಭಜನಾ ಸ್ಪರ್ಧೆ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿ.7 ರಂದು ಜರುಗಿತು.
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರು ದಾಸ ಸಂಕೀರ್ತನೆಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ಕುಂಟಾರು ರವೀಶ್ ತಂತ್ರಿಗಳು ಆಶೀರ್ವಚನ ನೀಡಿದರು.
ತತ್ವಮಸಿ ಗುಂಪಿನ ಸಂಚಾಲಕರು ಹಾಗೂ ದಾಸ ಸಂಕೀರ್ತನೆ ಸಂಘಟನೆಯ ಪ್ರಮುಖರಾದ ಪ್ರಕಾಶ್ ಕಣೆಮರಡ್ಕ ಅಧ್ಯಕ್ಷತೆ ವಹಿಸಿದ್ದರು.
ಕುಣಿತ ಭಜನಾ ಸ್ಪರ್ಧೆಯನ್ನು ಹಿರಿಯ ವೈದ್ಯರಾದ ಡಾ ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ ಉದ್ಘಾಟಿಸಿದರು.
ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಮುಖ್ಯ ಅತಿಥಿಗಳಾಗಿದ್ದರು.
ಕೋಲ್ಚಾರು ಶಾಲೆಯ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ.ಡಿ ಯವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷ 
ನಾರಾಯಣ ವೇದಿಕೆಯಲ್ಲಿದ್ದರು.
ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಸ್ವಾಗತಿಸಿದರು‌.
ಶ್ರೀಮತಿ ಸಾವಿತ್ರಿ ಕಣೆಮರಡ್ಕ ಸನ್ಮಾನಿತರನ್ನು ಪರಿಚಯಿಸಿದರು.
ಉದಯ ಭಾಸ್ಕರ್ ಸುಳ್ಯ ಕಾರ್ಯಕ್ರಮ ನಿರೂಪಿಸಿದರು.
ಶಿವಪ್ರಸಾದ್ ಉಗ್ರಾಣಿಮನೆ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading