Ad Widget

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಅಪರಾಧ ತಡೆ ಮಾಸಾಚರಣೆ 2025

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಸುಳ್ಯ ಪೋಲಿಸ್ ಠಾಣೆ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ-2025 ನಡೆಯಿತು.
ಸುಳ್ಯ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್  ಸರಸ್ವತಿ ‘ಪೋಸ್ಕೊ ಕಾಯ್ದೆ’ಯ ಕುರಿತು ಮತ್ತು ಸಬ್ ಇನ್ಸ್ಪೆಕ್ಟರ್ ಸಂತೋಷ್ ‘ಸೈಬರ್ ಅಪರಾಧಗಳ’ , ‘ಮಾದಕ ವಸ್ತುಗಳ ಬಳಕೆಯ ಅಪರಾಧ’ ಮತ್ತು ‘ಟ್ರಾಫಿಕ್ ನಿಯಮಗಳ’ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಸಂಸ್ಥೆಯ ಪ್ರಾಂಶುಪಾಲ ಸುರೇಶ್ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು. ಠಾಣೆಯ ಸಿಬ್ಬಂದಿಗಳಾದ ಸಂತೋಷ್, ಪ್ರಕಾಶ್ ಮತ್ತು ರಾಜಶೇಖರ ಉಪಸ್ಥಿತರಿದ್ದರು.
ಉಪನ್ಯಾಸಕ ಮೋಹನ್ ಚಂದ್ರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪದ್ಮಕುಮಾರ್ ಸಹಕರಿಸಿದರು. ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading