Ad Widget

ಚೊಕ್ಕಾಡಿ ಮಯೂರಿ ಯುವತಿ ಮಂಡಲದ ವತಿಯಿಂದ ಸ್ವಚ್ಛತಾ ಜಾಗೃತಿ ಕರಪತ್ರ ವಿತರಣೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025” ಕಾರ್ಯಕ್ರಮದ ಅಂಗವಾಗಿ ಡಿ.05 ರಂದು ಕುಕ್ಕುಜಡ್ಕ ಆಟೋ ಚಾಲಕರಿಗೆ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ವೃದ್ಧಿಗೊಳಿಸುವ ಕರಪತ್ರ ವಿತರಿಸಲಾಯಿತು.
ಸಮಾಜದಲ್ಲಿ ಆರೋಗ್ಯಕರ ಮತ್ತು ಸ್ವಚ್ಛವಾದ ವಾತಾವರಣ ನಿರ್ಮಾಣಕ್ಕೆ ಪ್ರೇರಣೆ ನೀಡುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ, ಪದಾಧಿಕಾರಿಗಳು ಹಾಗೂ ಸದಸ್ಯೆಯರು ಸಕ್ರಿಯವಾಗಿ ಪಾಲ್ಗೊಂಡು ಕರಪತ್ರಗಳನ್ನು ಜನರಿಂದ ಜನರಿಗೆ ತಲುಪಿಸುವ ಮೂಲಕ ಜನರಲ್ಲಿ ಸ್ವಚ್ಛತೆಯ ಮಹತ್ವವನ್ನು ಅರಿವು ಮೂಡಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading