ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪದಗ್ರಹಣ ಸಮಾರಂಭ ; ಅಧ್ಯಕ್ಷರಾಗಿ ನವೀನ್ ರೈ, ಕಾರ್ಯದರ್ಶಿಯಾಗಿ ಅಜಯ್ ಕುಮಾರ್, ಸಂಚಾಲಕರಾಗಿ ಗೋಪಾಲ್

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್(ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಇದರ 2025-27ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಂಗಳೂರಿನ ಕದ್ರಿ ಛಾಯಾಭವನದಲ್ಲಿ ಮಂಗಳವಾರ ನಡೆಯಿತು.

ಜಿಲ್ಲಾಧ್ಯಕ್ಷರಾಗಿ ನವೀನ್ ರೈ ಪಂಜಳ ಪುತ್ತೂರು, ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್ ಮಂಗಳೂರು, ಜಿಲ್ಲಾ ಸಂಚಾಲಕರಾಗಿ ಗೋಪಾಲ ಸುಳ್ಯ, ಕೋಶಾಧಿಕಾರಿ ಹೆರಿಕ್ ಡಿ’ಸೋಜ ಬಹ್ಮಾವರ, ಉಪಾಧ್ಯಕ್ಷರಾಗಿ ದೇವರಾಜ್ ಶೆಟ್ಟಿ ಸುರತ್ಕಲ್, ದತ್ತಾತ್ರೇಯ ಕಾರ್ಕಳ, ಜೊತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಮುಲ್ಕಿ, ಅಮೃತ್ ಬೀಜಾಡಿ ಕುಂದಾಪುರ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಕಾಶ್ ಶೇರಿಗಾರ್ ಉಡುಪಿ, ಹರೀಶ್ ಕುಂದರ್ ಬಂಟ್ವಾಳ, ಸಂಘಟನಾ ಕಾರ್ಯದರ್ಶಿಯಾಗಿ ರವಿ ಕೋಟ್ಯಾನ್ ಮೂಡುಬಿದಿರೆ,  ಚಿದಾನಂದ ಉಳ್ಳಾಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಕೊಡಂಗೆ ಬೆಳ್ತಂಗಡಿ, ಛಾಯಾ ಕಾರ್ಯದರ್ಶಿಯಾಗಿ ರಾಜೇಶ್ ಕಾಪು, ಮಾಧ್ಯಮ ಪ್ರತಿನಿಧಿಯಾಗಿ ಲೋಕೇಶ್ ಸುಬ್ರಹ್ಮಣ್ಯ ಅವರು ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡರು.

ಮಾಜಿ ಸಂಚಾಲಕರಾದ ಕರುಣಾಕರ ಕನಾಂಗಿ, ಪೂರ್ವ ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ಕಾರ್ಯದರ್ಶಿಯಾದ ದಯಾನಂದ್ ಬಂಟ್ವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಸೋಸಿಯೇಷನ್ ನ ಸಲಹಾ ಸಮಿತಿ ಸದಸ್ಯರು ಮಾಜಿ ಜಿಲ್ಲಾಧ್ಯಕ್ಷರುಗಳು ಹಾಗೂ 14 ವಲಯಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading