Ad Widget

ಕೊಲ್ಲಮೊಗ್ರು : ಗ್ರಾಮಸ್ಥರಿಗೆ ಹಾಗೂ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡದೇ ಅರಣ್ಯ ಇಲಾಖೆಯಿಂದ ಸರ್ವೇ ಕಾರ್ಯ ಆರಂಭ ; ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಸಭೆ – “ಮಾಹಿತಿ ನೀಡಿಯೇ ಸರ್ವೇ ಕಾರ್ಯ ಮುಂದುವರಿಸಬೇಕು” : ಗ್ರಾಮಸ್ಥರ ಆಗ್ರಹ

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯವರು ಗ್ರಾಮಸ್ಥರಿಗೆ ಹಾಗೂ ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೇ ಸರ್ವೇ ಕಾರ್ಯ ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಗ್ರಾಮಸ್ಥರು ಆಕ್ರೋಶಿತರಾಗಿದ್ದು, ಪ್ರತಿಭಟನೆಗೆ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

“ಗ್ರಾಮ ಪಂಚಾಯತ್ ಗೂ ಮಾಹಿತಿ ನೀಡದೇ ಸರ್ವೇ ಕಾರ್ಯ ಮಾಡುತ್ತಿರುವುದರಿಂದ ತಮ್ಮ ಕೃಷಿ ಭೂಮಿಗಳಿಗೆ ತೊಂದರೆಯಾಗಬಹುದು” ಎಂದು ಕೃಷಿಕರು ಆತಂಕಗೊಂಡಿದ್ದು, ಈ ಬಗ್ಗೆ ಡಿ.12ರಂದು ಕೊಲ್ಲಮೊಗ್ರದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಕೃಷಿಕರ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ “ಸರ್ವೇ ಕಾರ್ಯ ಮುಂದುವರಿಸಬೇಕಾದರೆ ಗ್ರಾಮಸ್ಥರಿಗೆ ಹಾಗೂ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿಯೇ ಸರ್ವೇ ಕಾರ್ಯ ಮುಂದುವರಿಸಬೇಕು” ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ, ಪ್ರಮುಖರಾದ ಚಂದ್ರಶೇಖರ ಬಾಳುಗೋಡು ಹಾಗೂ ರಮಾನಂದ ಎಣ್ಣೆಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading