Ad Widget

ಸುಳ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ “ಶುಚಿ 2025” ಆರೋಗ್ಯ ಅರಿವು ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇವರ ಸಹಯೋಗದೊಂದಿಗೆ ಆಯೋಜಿಸಲಾದ “ಶುಚಿ 2025” ಆರೋಗ್ಯ ಅರಿವು ಕಾರ್ಯಕ್ರಮ ಡಿ.13ರಂದು ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಎನ್.ಆರ್. ಅವರು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಡಾ.ಶಾಲಿನಿ ವಿ.ಎಲ್, ಸ್ತ್ರೀರೋಗ ತಜ್ಞರು ತಾಲೂಕು ಆಸ್ಪತ್ರೆ ಸುಳ್ಯ ಇವರು ವೈಯಕ್ತಿಕ “ಶುಚಿ, ಮಹಿಳಾ ಆರೋಗ್ಯ, ಪೌಷ್ಟಿಕ ಆಹಾರ ಹಾಗೂ ಆರೋಗ್ಯಕರ ಜೀವನಶೈಲಿ” ಕುರಿತು ಕಾಲೇಜಿನ ವಿದ್ಯಾರ್ಥಿಗಳಿಗೆ ಉಪಯುಕ್ತ ಅರಿವು ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಯುವಜನ ಸಂಯುಕ್ತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, “ಶುಚಿತ್ವ ಮತ್ತು ಆರೋಗ್ಯ ಜಾಗೃತಿಯ ಮಹತ್ವವನ್ನು ವಿವರಿಸಿ, ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಅತ್ಯಂತ ಅಗತ್ಯವೆಂದು” ತಿಳಿಸಿದರು.

ಮಯೂರಿ ಯುವತಿ ಮಂಡಲ  ಚೊಕ್ಕಾಡಿಯ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ತಂಟೆಪ್ಪಾಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವ ರೆಡ್ ಕ್ರಾಸ್‌ನ ಅಧಿಕಾರಿ ಭಾಸ್ಕರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕು.ಸ್ಪೂರ್ತಿ ಸ್ವಾಗತಿಸಿ, ಕು.ಅಕ್ಷತಾ ವಂದಿಸಿದರು. ಕು.ವಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಮಯೂರಿ ಯುವತಿ ಮಂಡಲದ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾಲೇಜಿನ ಪ್ರೇರಣಾ ಸಂಯೋಜಕ ರಾಮಕೃಷ್ಣ ಕೆ.ಎಸ್ ಕಾರ್ಯಕ್ರಮ  ಆಯೋಜಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading