Ad Widget

ಚೊಕ್ಕಾಡಿ ಮಯೂರಿ ಯುವತಿ ಮಂಡಲದ ವತಿಯಿಂದ ಅಮರಪಡ್ನೂರು ಗ್ರಾಮದ ಅಂಗಡಿಗಳಿಗೆ ಸ್ವಚ್ಚತಾ ಜಾಗೃತಿ ಕರಪತ್ರ ವಿತರಣೆ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ದಿನಾಂಕ ಡಿ.08ರಂದು ಅಮರಪಡ್ನೂರು ಗ್ರಾಮದ ಅಂಗಡಿಗಳಿಗೆ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ಕರಪತ್ರಗಳನ್ನು ಹಂಚಲಾಯಿತು.
ಈ ಸಂದರ್ಭದಲ್ಲಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ವಿವರಿಸಿ, ಆರೋಗ್ಯಕರ ಮತ್ತು ಸ್ವಚ್ಛ ಸಮಾಜ ನಿರ್ಮಾಣದ ಕುರಿತು ಅರಿವು ಮೂಡಿಸಲಾಯಿತು. ಸ್ವಚ್ಛತಾ ಜಾಗೃತಿ ಸಂದೇಶವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ತಂಟೆಪ್ಪಾಡಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯೆಯರು ಸಕ್ರಿಯವಾಗಿ ಭಾಗವಹಿಸಿದರು.
ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading