Ad Widget

ಕೊಲ್ಲಮೊಗ್ರು : ಅಮಾನತಿನಲ್ಲಿದ್ದ ಸಿಬ್ಬಂದಿಯನ್ನು ಕರ್ತವ್ಯಕ್ಕೆ ತೆಗೆದುಕೊಳ್ಳಲು ಆದೇಶ

ಕೆಲವು ತಿಂಗಳುಗಳ ಹಿಂದೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಂತೋಷ್ ಎಂಬುವವರ ಮೇಲೆ ಗ್ರಾಮ ಪಂಚಾಯತ್ ನ ಸ್ವತ್ತುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅವರನ್ನು ಅಮಾನತಿನಲ್ಲಿರಿಸಿತ್ತು. ಇದನ್ನು ಪ್ರಶ್ನಿಸಿ ಸಂತೋಷ್ ರವರು ಜಿಲ್ಲಾ ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿಗೆ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ನಂತರ ತನಿಖೆ ನಡೆದಿದ್ದು, ಸಂತೋಷ್ ಯಾವುದೇ ತಪ್ಪು ಮಾಡಿರುವುದು ಕಂಡುಬಂದಿರುವುದಿಲ್ಲ ಈ ಹಿನ್ನೆಲೆಯಲ್ಲಿ ಅವರು ನಿರಪರಾಧಿಯಾಗಿದ್ದು, ಮತ್ತೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಿರುವುದಾಗಿ ತಿಳಿದುಬಂದಿದ್ದು, ಹಾಗೂ ಅಮಾನತು ಅವಧಿಯಲ್ಲಿನ ಶೇ.50 ವೇತನ ನೀಡಬೇಕು ಎಂದು ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading