Ad Widget

ಸುಬ್ರಹ್ಮಣ್ಯ : ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ – ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ಡಿ.22 ರಂದು ಪ್ರತಿಭಟನೆ



ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗಿರುವುದನ್ನು ಖಂಡಿಸಿ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ಡಿ.22 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಲಿದೆ.

ಡಿ.22 ರಿಂದ 26 ರವರೆಗೆ ಕಿರುಷಷ್ಠಿ ಮಹೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧರ್ಮ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪೋಟೋಕಾಲ್ ನೆಪದಲ್ಲಿ ಅನ್ಯಧರ್ಮಿಯರನ್ನು ಅತಿಥಿಗಳಾಗಿ ಕರೆದಿರುವುದನ್ನು ಖಂಡಿಸಿ ಸುಬ್ರಹ್ಮಣ್ಯ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಪ್ರತಿಭಟನೆಗೆ ಕರೆ ನೀಡಿದೆ. ಸ್ಪೀಕರ್ ಯು.ಟಿ.ಖಾದರ್, ವಿಧಾನಪರಿಷತ್ ಶಾಸಕ ಐವನ್ ಡಿ,ಸೋಜಾ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಸೇರಿದಂತೆ ಹಲವರನ್ನು ಅತಿಥಿಯಾಗಿ ಕರೆದುದನ್ನು ಖಂಡಿಸಿ ಈ ಪ್ರತಿಭಟನೆಗೆ ಕರೆ ನೀಡಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading