Ad Widget

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಡಿ.20 ರಂದು ನಡೆಯಿತು. 
ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆ ಹಾಗೂ ಶಾಲಾ ಧ್ವಜಾರೋಹಣವನ್ನು  ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ ರೆ.ಫಾ.ಆಲ್ವಿನ್ ಎಡ್ವರ್ಡ್ ಡಿ’ಕುನ್ನಾ   ನೆರವೇರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟದ ಉದ್ಘಾಟನೆಯನ್ನು ಪಿ.ಬಿ ಸುಧಾಕರ್ ರೈ ಸಭಾಪತಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ತಾಲೂಕು  ಇವರು ಕ್ರೀಡಾ ಜ್ಯೋತಿಯಿಂದ  ದೀಪ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಾ, “ವಿದ್ಯಾರ್ಥಿಗಳು ದಿನನಿತ್ಯ ದೈಹಿಕ ವ್ಯಾಯಾಮಗಳನ್ನು ಮಾಡುತ್ತಾ  ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಕ್ರೀಡೆಯಲ್ಲಿ ಸಾಧನೆ ಮಾಡಿ ಹಾಗೂ ಉತ್ತಮ ಆರೋಗ್ಯವನ್ನು ಕಾಪಾಡಿ” ಎಂದು ಶುಭ ಹಾರೈಸಿದರು.
ಪ್ರೌಢ ಶಾಲಾ ಪೋಷಕ ಸಮಿತಿ  ಉಪಾಧ್ಯಕ್ಷರಾದ ಶ್ರೀಮತಿ ಸುಮಲತಾ ಕ್ರೀಡಾಕೂಟಕ್ಕೆ ಶುಭ ಕೋರಿದರು.
ವೇದಿಕೆಯಲ್ಲಿ ಪ್ರಾಥಮಿಕ  ಶಾಲಾ ಪೋಷಕರ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಸುನಿತಾ ಮೊಂತೆರೊ, ಪೂರ್ವ ಪ್ರಾಥಮಿಕ ಶಾಲಾ ಪೋಷಕರ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಜಯನಗರ, ಸೈಂಟ್ ಬ್ರಿಜಿಡ್ಸ್  ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ನವೀನ್ ಮಚಾದೋ, ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಣೀಯ ಪಥ ಸಂಚಲನ ಮೂಡಿ ಬಂತು. ಪ್ರೌಢಶಾಲಾ ವಿದ್ಯಾರ್ಥಿ ಚಂದನ್  8ನೇ, ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಶಾಲಾ ಮುಖ್ಯೋಪಾಧ್ಯಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ  ಸ್ವಾಗತಿಸಿ, ಪ್ರಾಥಮಿಕ ಶಾಲಾ ಕ್ರೀಡಾ ಮಂತ್ರಿ ಕಾರುಣ್ಯ 7ನೇ, ವಂದಿಸಿ, ಅನುಜ್ಞ ಎ ಹಾಗೂ ವೈಷ್ಣವಿ. ಜಿ.ಕೆ 9ನೇ   ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ  ಹುದೇರಿ, ಉಮೇಶ್ ಪಂಜದಬೈಲು ಹಾಗೂ ಶಿಕ್ಷಕರು ಹಾಗೂ ಶಿಕ್ಷಕೇತರರು  ಕ್ರೀಡಾಕೂಟದ ಯಶಸ್ವಿಗೆ  ಸಹಕರಿಸಿದರು. 
ಸುಮಾರು 700 ವಿಜೇತ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading