Ad Widget

ಸುಬ್ರಹ್ಮಣ್ಯ : ಕುಕ್ಕೆ ಕಿರುಷಷ್ಠಿ ಸಾಂಸ್ಕೃತಿಕ ವೈಭವ ಉದ್ಘಾಟನೆ ; “ಕ್ಷೇತ್ರಾರಾಧನೆ ಭಾರತೀಯ ಸಂಸ್ಕೃತಿಯಲ್ಲಿ ಮಹೋನ್ನತವಾದುದು” : ಶ್ರೀ ವಿಖ್ಯಾತಾನಂದ ಸ್ವಾಮೀಜಿ ; “ವೈವಿಧ್ಯತೆಯಲ್ಲಿ ಏಕತೆ ಸಾಧಿಸಿರುವುದು ಭಾರತದ ಹಿರಿಮೆ” : ಶ್ರೀ ಬಸವಾನಂದ ಸ್ವಾಮೀಜಿ

ಸುಬ್ರಹ್ಮಣ್ಯ : “ಕ್ಷೇತ್ರದಲ್ಲಿನ ವೈದಿಕ ವಿದಿ ವಿಧಾನಗಳು, ಅರ್ಚಕರು ಹೇಳುವ ಮಂತ್ರ, ಉತ್ಸವಗಳು, ಅನ್ನದಾನ ಈ ಪಂಚ ಸಂಗತಿಗಳು ಕ್ಷೇತ್ರದ ಪಾವಿತ್ರ್ಯತೆಯನ್ನು ಹೆಚ್ಚಿಸುತ್ತದೆ. ಕ್ಷೇತ್ರಾರಾಧನೆ ಭಾರತೀಯ ಸಂಸ್ಕೃತಿಯಲ್ಲಿ ಮಹೋನ್ನತವಾದುದು” ಎಂದು  ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಐದು ದಿನಗಳ ಕಾಲ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ನಡೆಯುವ ಧಾರ್ಮಿಕ ಸಮ್ಮೇಳನ ಹಾಗೂ   ಸಾಂಸ್ಕೃತಿಕ ವೈಭವದ ಉದ್ಘಾಟನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಶ್ರೀ ಗುರುಬಸವ ಮಹಾಮನೆ ಚನ್ನಯನಗಿರಿಯ ಶ್ರೀ ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡುತ್ತಾ, “ವೈವಿಧ್ಯತೆಯಲ್ಲಿ ಏಕತೆ ಸಾಧಿಸಿರುವುದು ಭಾರತದ ಹಿರಿಮೆ. ಶುದ್ಧವಾದ ನೀರು, ಗಾಳಿ ಸೇವನೆ, ಪರಿಶುದ್ಧವಾದ ಚಿಂತನೆ ಮತ್ತು ಉಪವಾಸ ಶ್ರೇಷ್ಠವಾದ ಔಷಧಿ. ಇದರ ಪರಿಪಾಲನೆಯಿಂದ ದೇಹಾರೋಗ್ಯ ಅಭಿವೃದ್ಧಿಯಾಗುತ್ತದೆ” ಎಂದು ನುಡಿದರು.
ಕಾರ್ಯಕ್ರಮವನ್ನು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ.ಡಿ.ಎಸ್.ಗಟ್ಟಿ ಉದ್ಘಾಟಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್, ಕೆಡಿಪಿ ಸದಸ್ಯ ಶಿವರಾಮ ರೈ ಮುಖ್ಯ ಅತಿಥಿಗಳಾಗಿದ್ದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಡಾ.ರಘು, ಅಜಿತ್ ಕುಮಾರ್, ಸೌಮ್ಯ ಭರತ್, ಲೀಲಾ ಮನಮೋಹನ್, ಪ್ರವೀಣಾ ರೈ ಮರುವಂಜ, ಮಾಸ್ಟರ್ ಪ್ಲಾನ್ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಸತೀಶ್ ಕೂಜುಗೋಡು, ಅಚ್ಯುತ ಗೌಡ ಬಳ್ಪ ವೇದಿಕೆಯಲ್ಲಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading