Ad Widget

ಶೌಚಾಲಯ ನಿರ್ಮಿಸಿಕೊಡುವ ಮೂಲಕ ಬಡ ಕುಟುಂಬಕ್ಕೆ ಆಸರೆಯಾದ ಶಾಸ್ತಾವು ಯುವಕ ಮಂಡಲ ರೆಂಜಾಳ ; ಬಯಲು ಶೌಚಮುಕ್ತ ಗ್ರಾಮ ಅಭಿಯಾನಕ್ಕೆ ದಿಟ್ಟ ಹೆಜ್ಜೆ – ವ್ಯಾಪಕ ಮೆಚ್ಚುಗೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಆಶ್ರಯದಲ್ಲಿ ನಡೆಯುತ್ತಿರುವ “ಪಂಚಸಪ್ತತಿ – 2025 ಸ್ವಚ್ಚತಾ ಅಭಿಯಾನದ ಅಂಗವಾಗಿ ರೆಂಜಾಳ ಶಾಸ್ತಾವು ಯುವಕ ಮಂಡಲದ ಸದಸ್ಯರು ಮರ್ಕಂಜ ಗ್ರಾಮದ ಮಾವಜಿ ದುಗ್ಗಪ್ಪ ಗೌಡರ ಮನೆಗೆ ನೂತನ ಶೌಚಾಲಯ ನಿರ್ಮಿಸಿಕೊಡುವ ಮೂಲಕ ಮಾದರಿಯಾಗಿದ್ದಾರೆ. ನೂತನ ಶೌಚಾಲಯದ ಹಸ್ತಾಂತರ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಹೊಸೊಳಿಕೆ “ಗ್ರಾಮ ಪಂಚಾಯತ್ ನ ವಿನಂತಿಯ ಮೇರೆಗೆ ಈ ಸಮಾಜಮುಖಿ ಕಾರ್ಯವನ್ನು ಶಾಸ್ತಾವು ಯುವಕ ಮಂಡಲದ ಸದಸ್ಯರು ಮಾಡಿರುತ್ತಾರೆ. ಎಲ್ಲಾ ಸದಸ್ಯರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತಾ ಬಯಲು ಶೌಚಮುಕ್ತ ಗ್ರಾಮ ಅಭಿಯಾನಕ್ಕೆ ಇದೊಂದು ದಿಟ್ಟ ಹೆಜ್ಜೆಯಾಗಿದೆ” ಎಂದರು.
ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯರಾದ ಗೋವಿಂದ ಅಳವುಪಾರೆ ಅವರು “ನಮ್ಮ ಮನವಿಗೆ ಸ್ಪಂದಿಸಿ ಶಾಸ್ತಾವು ಯುವಕ ಮಂಡಲದ ಸದಸ್ಯರು ಅತ್ಯುತ್ತಮ ಕಾರ್ಯವನ್ನು ಮಾಡಿದ್ದಾರೆ. ಇದರೊಂದಿಗೆ ಪ್ಲಾಸ್ಟಿಕ್ ಮುಕ್ತ ಮರ್ಕಂಜ ಗ್ರಾಮ ಸೇರಿದಂತೆ ಹಲವು ಸ್ವಚ್ಚತಾ ಕಾರ್ಯಗಳನ್ನು ಶಾಸ್ತಾವು ಯುವಕ ಮಂಡಲದ ಸದಸ್ಯರು ಈಗಾಗಲೇ ಮಾಡಿರುತ್ತಾರೆ. ಇವರೆಲ್ಲರಿಗೂ ಅಭಿನಂದನೆಗಳು” ಎಂದು ಹೇಳಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading