Ad Widget

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಪೋಷಕರ ಕ್ರೀಡಾಕೂಟ

ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಕ್ರೀಡಾಕೂಟವು ಡಿ.22 ರಂದು ನಡೆಯಿತು.
ಸಭಾಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ, ರೆ.ಫಾ. ಆಲ್ವಿನ್ ಎಡ್ವರ್ಡ್ ಡಿ’ ಕುನ್ಹ ವಹಿಸಿ ಶುಭ ಕೋರಿದರು.
ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಸೂಫಿ  ಪೆರಾಜೆ ಉದ್ಘಾಟಿಸಿ ಮಾತನಾಡುತ್ತಾ, “ಪೋಷಕರು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡೆಯ ಬಗ್ಗೆ ಪ್ರೇರಣೆ ನೀಡಬೇಕು ಮತ್ತು ಪ್ರೋತ್ಸಾಹ ನೀಡಬೇಕು” ಎಂದರು.

ವೇದಿಕೆಯಲ್ಲಿ ಪೋಷಕ ಸಮಿತಿ ಉಪಾಧ್ಯಕ್ಷರುಗಳಾದ ಶ್ರೀಮತಿ  ಸುಮಲತಾ, ಶ್ರೀಮತಿ ಸುನಿತ   ಮೊಂತೆರೋ, ಶ್ರೀ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ಸ್ಟೆಲ್ಲಾ ಸ್ವಾಗತಿಸಿ, ಪ್ರವೀಣ್ ಕುಮಾರ್ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ  ಹುದೇರಿ, ಉಮೇಶ್ ಹಾಗೂ ಶಿಕ್ಷಕ, ಶಿಕ್ಷಕೇತರರು ಕ್ರೀಡಾ ಸ್ಪರ್ಧೆಗಳ  ಯಶಸ್ವಿಗೆ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading